Latest

ವಿವಾಹಿತೆಯ ಪ್ರೇಮ ಪುರಾಣ: ಮೂರನೆಯವನ ಜೊತೆ ಸೇರಿ ಎರಡನೆಯವನನ್ನು ಕೊಂದಳು!

ವಿವಾಹಿತೆ ಹಿಂದೆ ಬಿದ್ದು ಯುವಕನೊಬ್ಬ ಬರ್ಬರವಾಗಿ ಕೊಲೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನಲ್ಲಿ ನಡೆದಿದೆ. ಕೋಲಾರದ ಮಾಲೂರು ತಾಲೂಕಿನ ಅಯ್ಯಪ್ಪನಗರದ ನಿವಾಸಿ ಚೇತನ್ ಮೃತ ದುರ್ದೈವಿ. ಕಳೆದ ಅಕ್ಟೋಬರ್‌ 26ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮುಗಳೂರು ಬ್ರಿಡ್ಜ್‌ ಸಮೀಪದ ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಚೇತನ್‌ ಎಂದು ಗುರುತಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್‌ವೊಂದು ಸಿಕ್ಕಿದೆ.

ಶೋಭಾ ಈ ಹಿಂದೆ ಅತ್ತಿಬೆಲೆ ಕೊಲೆ ಯತ್ನ ಪ್ರಕರಣದಲ್ಲಿ ಜೈಲಿಗೆ ಸೇರಿದ್ದಳು. ಪತಿ, ಅತ್ತೆ, ಮಾವರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ್ದಳು. ಈ ಪ್ರಕರಣದಲ್ಲಿ ಜೈಲು ಸೇರಿ ಬೇಲ್ ಮೇಲೆ ರಿಲೀಸ್ ಆಗಿದ್ದಳು. ಜೈಲಿನಿಂದ ಹೊರಬಂದ ಮೇಲೆ ಟಿಸಿ ಪಾಳ್ಯದಲ್ಲಿ ವಾಸವಾಗಿದ್ದಳು. ಅಲ್ಲೇ ಸಲೂನ್ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಿಕೊಂಡಿದ್ದಳು.

ನಂತರ ಶೋಭಾ ಚೇತನ್‌ಗೆ 8 ತಿಂಗಳ ಹಿಂದೆ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಈತನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ನಡುವೆ ಕಳೆದ ಮೂರು ತಿಂಗಳ ಹಿಂದೆ ಶೋಭಾಳಿಗೆ ಸತೀಶ್ ಎಂಬಾತನ ಪರಿಚಯವಾಗಿತ್ತು. ಆತನ ಜತೆಗೂ ಪ್ರೇಮ ಪುರಾಣ ಶುರು ಮಾಡಿದ್ದಳು. ಸತೀಶ್ ಹಣಕಾಸಿನ ವಿಚಾರದಲ್ಲಿ ಚೇತನ್‌ಕ್ಕಿಂತ ಹಣವಂತನಾಗಿದ್ದ. ಶೋಭಾಳಿಗಾಗಿ ಹೊಸದೊಂದು ಸಲೂನ್ ಬ್ಯೂಟಿ ಪಾರ್ಲರ್ ಮಾಡಿಕೊಡಲು ಸಿದ್ಧತೆ ನಡೆಸಿದ್ದ. ಈ ನಡುವೆ ಶೋಭಾ ಚೇತನ್‌ನಿಂದ ದೂರವಾಗಲು ನಿರ್ಧರಿಸಿದ್ದಳು.

ಹೀಗಾಗಿ ಸತೀಶ್‌ ಜತೆಗೆ ನಾಟಕವಾಡಲು ಶುರು ಮಾಡಿದ್ದಳು. ಚೇತನ್ ತನ್ನ ಹಿಂದೆ ಬಿದ್ದು ಪೀಡಿಸುತ್ತಿದ್ದಾನೆ ಎಂದು ಕಥೆ ಕಟ್ಟಿದ್ದಳು. ಅದಾದ ಬಳಿಕ ಸತೀಶ್‌ ಜತೆ ಸೇರಿ ಚೇತನ್ ಕೊಲೆ ಮಾಡಲು ಸಂಚು ರೂಪಿಸಿದ್ದಳು. ಕಳೆದ ಅ.26ರಂದು ಹೊಸಕೋಟೆ ಐಶ್ವರ್ಯ ಬಾರ್‌ನಲ್ಲಿ ಎಣ್ಣೆ ಪಾರ್ಟಿ ಯೋಜಿಸಿದ್ದಳು. ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಮುಗಳೂರು ಬಳಿ ಬಂದಾಗ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಹೊಳೆಗೆ ಎಸೆದು ಹೋಗಿದ್ದರು.
ಈ ಸಂಬಂಧ ಪೊಲೀಸರು ತನಿಖೆ ನಡೆಸಿದಾಗ ವಿವಾಹಿತ ಮಹಿಳೆಗಾಗಿ ಈ ಕೊಲೆ ನಡೆದಿದೆ ಎಂಬುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಸರ್ಜಾಪುರ ಪೊಲೀಸರು ಆರೋಪಿಗಳಾದ ಸತೀಶ್, ಶಶಿ ಹಾಗೂ ಶೋಭಾಳನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

10 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

16 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago