Latest

ಮಾಜಿ ಪ್ರೇಯಸಿಯ ದೇಹ ತುಂಡರಿಸಿ ಹತ್ಯೆಗೈದವನಿಗೆ ಗುಂಡು

ದೇಶದಲ್ಲಿ ಪ್ರೀತಿಸಿದ ಹುಡುಗಿಯ ದೇಹವನ್ನೇ ತುಂಡರಿಸುವ ಭೀಕರ ಕೃತ್ಯವು ಸಮೂಹಸನ್ನಿಯಂತಾಗಿದೆ. ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ ದೇಹವನ್ನು ಅಫ್ತಾಬ್‌ ಅಮೀನ್‌ ಪೂನಾವಾಲಾ ಎಂಬ ದುರುಳನು 35 ಭಾಗಗಳಾಗಿ ಕತ್ತರಿಸಿದ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ವ್ಯಕ್ತಿಯೊಬ್ಬ ಮಾಜಿ ಪ್ರೇಯಸಿಯ ದೇಹವನ್ನು ಆರು ಭಾಗಗಳಾಗಿ ತುಂಡರಿಸಿ ಹತ್ಯೆಗೈದಿದ್ದಾನೆ.
ಪೊಲೀಸರು ಈತನನ್ನು ಬಂಧಿಸಿದ್ದು, ಕೃತ್ಯದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಜಮ್‌ಗಢ ಜಿಲ್ಲೆಯ ಪಶ್ಚಿಮಿ ಗ್ರಾಮದಲ್ಲಿ ಪ್ರಿನ್ಸ್‌ ಯಾದವ್‌ ಎಂಬಾತನು ಅನುರಾಧಾ ಎಂಬ ಯುವತಿಯನ್ನು ಹತ್ಯೆಗೈದಿದ್ದಾನೆ. ನವೆಂಬರ್‌ 9ರಂದು ಬೈಕ್‌ನಲ್ಲಿ ಅನುರಾಧಾಳನ್ನು ಕರೆದುಕೊಂಡ ಯಾದವ್‌, ಗೆಳೆಯನ ಜತೆಗೂಡಿ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಹತ್ಯೆಗೈದಿದ್ದಾನೆ. ಬಳಿಕ ಇಬ್ಬರೂ ಸೇರಿ ಒಂದು ಚೀಲದಲ್ಲಿ ಆಕೆಯ ದೇಹದ ಭಾಗಗಳನ್ನು ಪ್ಯಾಕ್‌ ಮಾಡಿ ಕೆರೆಗೆ ಎಸೆದಿದ್ದಾರೆ. ನವೆಂಬರ್‌ 15ರಂದು ಗ್ರಾಮಸ್ಥರಿಗೆ ಶವ ಸಿಕ್ಕಿದ್ದು, ಇದಾದ ನಂತರ ಪ್ರಕರಣ ಸುದ್ದಿಯಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಪ್ರಿನ್ಸ್‌ ಯಾದವ್‌ನನ್ನು ಬಂಧಿಸಿ, ಕೃತ್ಯ ಎಸಗಿದ ಸ್ಥಳಕ್ಕೆ ಅವನನ್ನು ಕರೆದೊಯ್ದಿದ್ದಾರೆ. ಇದೇ ವೇಳೆ ಆತ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಸದ್ಯ, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

5 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

5 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

19 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago