Latest

ನಾಳೆಯೇ ಕಾಂಗ್ರೆಸ್ ನಾಯಕರಿಂದ ನೂತನ ಸಿಎಂ ಆಯ್ಕೆ

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕರ ಸಂಭ್ರಮ ಮುಗಿಲು ಮುಟ್ಟಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ ವೇಣುಗೋಪಾಲ ಸಿಹಿ ತಿನ್ನಿಸಿ ವಿಜಯೋತ್ಸವ ಆಚರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆ ಕೈ ನಾಯಕರು ಸರ್ಕಾರ ರಚನೆಗೆ ತಯಾರಿ ನಡೆಸಿದ್ದಾರೆ. ನಾಳೆ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿರುವ ಹಿಲ್ಟನ್ ಹೋಟೆಲ್‌ನಲ್ಲಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಸಿಎಂ ಯಾರಾಗಬೇಕು. ಸರ್ಕಾರ ಯಾವಾಗ ರಚಿಸಬೇಕು ಅನ್ನೋ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ‌ಸಭೆಗೆ ಎಐಸಿಸಿ ವೀಕ್ಷಕರು ಆಗಮಿಸಲಿದ್ದಾರೆ. ವೀಕ್ಷಕರ ಸಮ್ಮುಖದಲ್ಲಿ ನೂತನ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಕಾಂಗ್ರೆಸ್‌ ಸಿಎಂ ರೇಸ್‌ನಲ್ಲಿ ಪ್ರಮುಖವಾಗಿ ಇಬ್ಬರ ಹೆಸರು ಪ್ರಸ್ತಾಪವಾಗ್ತಿದೆ. ಹೀಗಾಗಿ ಶಾಸಕರ ಅಭಿಪ್ರಾಯ ಪಡೆದು ಸಿಎಂ ಅಭ್ಯರ್ಥಿ ಆಯ್ಕೆ ಮಾಡುವ ಸಾಧ್ಯತೆ ಇದೆ. ನಾಳೆ ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶಾಸಕರು ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ನಗರದ ಹಿಲ್ಟನ್ ಹಾಗೂ ಶಾಂಘ್ರಿಲಾ ಹೋಟೆಲ್‌ನಲ್ಲಿ ರೂಮ್‌ಗಳನ್ನು ಬುಕ್ ಮಾಡಲಾಗಿದೆ. ಇಂದು ರಾತ್ರಿಯೇ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago