ಜಾರ್ಖಂಡ್‌ನಲ್ಲಿ ಮೊಬೈಲ್ ಕಳ್ಳತನದ ಆರೋಪದ ಮೇಲೆ ಮಹಿಳೆಯೊಬ್ಬಳ ಕೈ ಕಾಲು ಕಟ್ಟಿ ಪೊಲೀಸರು ಎಳೆದೊಯ್ದಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ ಪ್ರಕರಣದಲ್ಲಿ ಮೂವರು ಮಹಿಳಾ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಘಟನೆ ಸಂಬಂಧ ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್‌ಐ) ಸೇರಿದಂತೆ ಮೂವರು ಮಹಿಳಾ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದು, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಬೊಕಾರೊ ಎಸ್‌ಪಿ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ. ವೈರಲ್ ದೃಶ್ಯದಲ್ಲಿ ಇಬ್ಬರು ಮಹಿಳಾ ಪೊಲೀಸರು ಆರೋಪಿ ಮಹಿಳೆಯ ತೋಳುಗಳನ್ನು ಹಿಡಿದಿದ್ದರೆ, ಮತ್ತೊಬ್ಬ ಮಹಿಳಾ ಪೊಲೀಸ್ ಆರೋಪಿಯ ಕಾಲುಗಳಿಗೆ ಹಗ್ಗ ಕಟ್ಟಿ ಎಳೆದೊಯ್ದಿದ್ದಾರೆ.
ಮೊಬೈಲ್ ಫೋನ್ ಕಳ್ಳತನದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಪತಿಯನ್ನು ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಬಳಿಕ ಮಹಿಳೆಯನ್ನು ಚಾಸ್ ಮಹಿಳಾ ಠಾಣೆಗೆ ವರ್ಗಾವಣೆ ಮಾಡುವಾಗ ಆಕೆ ನೀರು ಕೇಳುವ ನೆಪದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಮಹಿಳಾ ಸಿಬ್ಬಂದಿ ಬೆನ್ನಟ್ಟಿದಾಗ ಆಕೆ ಎತ್ತರದ ಗೋಡೆಯನ್ನು ಹಾರುವಾಗ ಗಾಯಗೊಂಡಳು. ನಂತರ ಅವರು ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…