ಜೈಲುಗಳಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಧಾರವಾಡ ಕೇಂದ್ರ ಕಾರಾಗೃಹದಿಂದಲೇ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಅಪ್ರಾಪ್ತ ಸಂತ್ರಸ್ತೆಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫರ್ವೇಜ್ ಎಂಬಾತ, ಜೈಲಿನೊಳಗಿಂದಲೇ ಬಾಲಕಿಗೆ ನಿರಂತರವಾಗಿ ವಿಡಿಯೋ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಸಾಕ್ಷಿ ಹೇಳುವಂತೆ ಒತ್ತಾಯಿಸಿದ್ದು, ಪಾಲಿಸದಿದ್ದರೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡುತ್ತಿದ್ದನು. ಅಲ್ಲದೇ, ಕರೆ ಸ್ವೀಕರಿಸದಿದ್ದರೆ ‘ನೇಹಾ ಹಿರೇಮಠ್‌ಗೆ ಆದ ಗತಿಯೇ ನಿನಗೂ ಆಗುತ್ತದೆ’ ಎಂದು ಬೆದರಿಕೆ ಹಾಕಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜೊತೆಗೆ, ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಅಕ್ರಮ ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಎಬ್ಬಿಸಿದೆ. ಅಧಿಕಾರಿಗಳು ಮೊಬೈಲ್ ಬಳಕೆಗೆ ಕಟ್ಟುನಿಟ್ಟಿನ ನಿಷೇಧವಿದೆ ಎಂದು ಹೇಳುತ್ತಿದ್ದರೂ, ವಾಸ್ತವ ಸ್ಥಿತಿ ಬೇರೆ ಎಂಬುದು ಈ ಪ್ರಕರಣದಿಂದ ಸ್ಪಷ್ಟವಾಗಿದೆ.
ಇದಲ್ಲದೆ, ಈ ಬೆಳವಣಿಗೆ ಕುರಿತು ತಿಳಿದಿದ್ದರೂ ಜೈಲಾಧಿಕಾರಿಗಳು ನಿರ್ಲಕ್ಷ್ಯ ತೋರಿದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕಿದೆ ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…