Categories: Latest

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ ಮೂಡಿಸಿತ್ತು. ಇದೀಗ ಈ ಹಾರಾಟದ ಹಿಂದಿನ ನಿಜವಾದ ಕಾರಣ ಬಹಿರಂಗವಾಗಿದ್ದು, ಇದು ಯಾವುದೇ ಕಾನೂನುಬಾಹಿರ ಚಟುವಟಿಕೆ ಅಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತು ಗೃಹ ಸಚಿವರು ವಿಧಾನ ಪರಿಷತ್ತಿನಲ್ಲಿ ಲಿಖಿತ ಉತ್ತರ ನೀಡಿದ್ದು, ಇದು ಕೇಂದ್ರ ಸರ್ಕಾರ ಅನುಮೋದಿತ ವೈಜ್ಞಾನಿಕ ಸಮೀಕ್ಷೆಯ ಭಾಗವಾಗಿದೆ ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ. ಆರತಿ ಕೃಷ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಲೆನಾಡು ಭಾಗದಲ್ಲಿ ನಡೆದ ಈ ಹಾರಾಟ ಖನಿಜ ಸಂಪತ್ತಿನ ಪತ್ತೆಗಾಗಿ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭೂಗರ್ಭದಲ್ಲಿರುವ ಖನಿಜ ನಿಕ್ಷೇಪಗಳನ್ನು ಗುರುತಿಸುವ ಉದ್ದೇಶದಿಂದ ಈ ಸಮೀಕ್ಷೆ ಕೈಗೊಳ್ಳಲಾಗಿದೆ. ಈ ಕಾರ್ಯವನ್ನು ಭಾರತ ಸರ್ಕಾರ ಎಕ್ಸ್-ಕ್ಯಾಲಿಬರ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ನೀಡಿದ್ದು, ಹಿಮಾಲಯನ್ ಹೆಲಿ ಸರ್ವಿಸ್ ಲಿಮಿಟೆಡ್ ಸಹಯೋಗದಲ್ಲಿ ಹಾರಾಟ ನಡೆಸಲಾಗುತ್ತಿದೆ.

ಕಡಿಮೆ ಎತ್ತರದಲ್ಲಿ ಹಾರಾಡುವ ಈ ವಿಮಾನದಲ್ಲಿ ಅತ್ಯಾಧುನಿಕ ಮ್ಯಾಗ್ನೆಟಿಕ್ ಗ್ರೇಡಿಯೋ ಮೀಟರ್ ಮತ್ತು ರೇಡಿಯೋ ಮೀಟರ್ ಸಂವೇದಕಗಳನ್ನು ಅಳವಡಿಸಲಾಗಿದ್ದು, ಭೂಗರ್ಭದ ಖನಿಜಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಮೀಕ್ಷೆ ಕಾರ್ಯಕ್ಕೆ ಫೆಬ್ರವರಿ 13, 2026ರಿಂದ ಜುಲೈ 31, 2026ರವರೆಗೆ ಅನುಮತಿ ನೀಡಲಾಗಿದೆ.

ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿಲ್ಲ ಎಂಬ ಗೊಂದಲಕ್ಕೂ ಸರ್ಕಾರ ಸ್ಪಷ್ಟನೆ ನೀಡಿದೆ. ಹಿಮಾಲಯನ್ ಹೆಲಿ ಸರ್ವಿಸ್ ಸಂಸ್ಥೆಯು ಫೆಬ್ರವರಿ 13ರಂದೇ ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದೆ ಎಂದು ತಿಳಿಸಿದೆ. ಸಾರ್ವಜನಿಕರಲ್ಲಿ ಉಂಟಾದ ಆತಂಕ ನಿವಾರಣೆಗೆ ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago