Latest

ಪತ್ನಿ ತೊರೆದು ಹೋದ ಸಿಟ್ಟಲ್ಲಿ ಅತ್ತೆಯ ಮೂಗು ಕಚ್ಚಿದ ಅಳಿಯ!

ಪತ್ನಿ ತೊರೆದು ಹೋದಳೆಂದು ಸಿಟ್ಟಿಗೆದ್ದ ಅಳಿಯನೊರ್ವ ಅತ್ತೆಯ ಮೂಗು ಕತ್ತರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ರಾಜು ಬಘೇಲ್ ಎಂಬಾತನೇ ಹೀಗೆ ಅತ್ತೆಯ ಮೂಗು ಕತ್ತರಿಸಿದ ದುರುಳ ಅಳಿಯ. ಈ ರಾಜು ಬಘೇಲ್ ಸದಾ ತನ್ನ ಹೆಂಡತಿ ಶ್ಯಾಮ್ ಸುಂದರಿಯನ್ನು ಥಳಿಸುತ್ತಿದ್ದ. ಗಂಡನ ಕಿರುಕುಳದಿಂದ ಬೇಸತ್ತ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ತವರು ಮನೆ ಸೇರಿಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ರಾಜು ಬಘೇಲ್ ಈ ಕೃತ್ಯವೆಸಗಿದ್ದಾನೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರೇನಾ ಜಿಲ್ಲೆಯ ಚಂದಾಪುರ ಗ್ರಾಮದ ನಿವಾಸಿಯಾದ 55 ವರ್ಷದ ರಾಮ್ ವಿಲಾಸಿ ತನ್ನ ಮಗಳನ್ನು ನೋಡುವ ಸಲುವಾಗಿ ತನ್ನ ಗಂಡ ರಾಮಹಿತ್ ಬಘೇಲ್ ಹಾಗೂ ಪುತ್ರನೊಂದಿಗೆ ಮಗಳ ಮನೆಗೆ ತೆರಳಿದ್ದಾರೆ. ಮಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರಾಮ್ ವಿಲಾಸಿಯ ಅಳಿಯ ರಾಜು ಬಘೇಲ್ ಹಾಗೂ ಆತನ ಇಬ್ಬರು ಸಂಬಂಧಿಗಳು ಇವರನ್ನು ರಸ್ತೆ ಮಧ್ಯೆ ಅಡ್ಡ ಹಾಕಿದ್ದು, ಜಗಳ ಮಾಡಲು ಶುರು ಮಾಡಿದ್ದಾರೆ. ಇದಕ್ಕೆ ಅತ್ತೆ ರಾಮ್ ವಿಲಾಸಿ ವಿರೋಧ ವ್ಯಕ್ತಪಡಿಸಿದಾಗ ಅಳಿಯ ರಾಜು ಬಘೇಲ್ ಆಕೆಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಅಲ್ಲದೇ ಮಾವ ರಾಮ್‌ಹಿತ್ ಬಘೇಲ್ ಅವರನ್ನು ಥಳಿಸಿದ್ದಾನೆ.
ಈ ಬಗ್ಗೆ ಸ್ಥಳೀಯರು 100 ಗೆ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಹೀಗೆ ಅತ್ತೆಯನ್ನು ಕಚ್ಚಿ ಗಾಯಗೊಳಿಸಿದ ಅಳಿಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಯೋಗೇಂದ್ರ ಸಿಂಗ್ ಜಾಡೌನ್ ಹೇಳಿದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago