ಪತ್ನಿ ತೊರೆದು ಹೋದಳೆಂದು ಸಿಟ್ಟಿಗೆದ್ದ ಅಳಿಯನೊರ್ವ ಅತ್ತೆಯ ಮೂಗು ಕತ್ತರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ರಾಜು ಬಘೇಲ್ ಎಂಬಾತನೇ ಹೀಗೆ ಅತ್ತೆಯ ಮೂಗು ಕತ್ತರಿಸಿದ ದುರುಳ ಅಳಿಯ. ಈ ರಾಜು ಬಘೇಲ್ ಸದಾ ತನ್ನ ಹೆಂಡತಿ ಶ್ಯಾಮ್ ಸುಂದರಿಯನ್ನು ಥಳಿಸುತ್ತಿದ್ದ. ಗಂಡನ ಕಿರುಕುಳದಿಂದ ಬೇಸತ್ತ ಆಕೆ ಪೊಲೀಸರಿಗೆ ದೂರು ನೀಡಿದ್ದಳು. ಅಲ್ಲದೇ ತವರು ಮನೆ ಸೇರಿಕೊಂಡಿದ್ದಳು. ಇದರಿಂದ ಸಿಟ್ಟಿಗೆದ್ದ ರಾಜು ಬಘೇಲ್ ಈ ಕೃತ್ಯವೆಸಗಿದ್ದಾನೆ. ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೊರೇನಾ ಜಿಲ್ಲೆಯ ಚಂದಾಪುರ ಗ್ರಾಮದ ನಿವಾಸಿಯಾದ 55 ವರ್ಷದ ರಾಮ್ ವಿಲಾಸಿ ತನ್ನ ಮಗಳನ್ನು ನೋಡುವ ಸಲುವಾಗಿ ತನ್ನ ಗಂಡ ರಾಮಹಿತ್ ಬಘೇಲ್ ಹಾಗೂ ಪುತ್ರನೊಂದಿಗೆ ಮಗಳ ಮನೆಗೆ ತೆರಳಿದ್ದಾರೆ. ಮಗಳನ್ನು ಕರೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರಾಮ್ ವಿಲಾಸಿಯ ಅಳಿಯ ರಾಜು ಬಘೇಲ್ ಹಾಗೂ ಆತನ ಇಬ್ಬರು ಸಂಬಂಧಿಗಳು ಇವರನ್ನು ರಸ್ತೆ ಮಧ್ಯೆ ಅಡ್ಡ ಹಾಕಿದ್ದು, ಜಗಳ ಮಾಡಲು ಶುರು ಮಾಡಿದ್ದಾರೆ. ಇದಕ್ಕೆ ಅತ್ತೆ ರಾಮ್ ವಿಲಾಸಿ ವಿರೋಧ ವ್ಯಕ್ತಪಡಿಸಿದಾಗ ಅಳಿಯ ರಾಜು ಬಘೇಲ್ ಆಕೆಯ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಅಲ್ಲದೇ ಮಾವ ರಾಮ್‌ಹಿತ್ ಬಘೇಲ್ ಅವರನ್ನು ಥಳಿಸಿದ್ದಾನೆ.
ಈ ಬಗ್ಗೆ ಸ್ಥಳೀಯರು 100 ಗೆ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಗಾಯಾಳುವನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಹೀಗೆ ಅತ್ತೆಯನ್ನು ಕಚ್ಚಿ ಗಾಯಗೊಳಿಸಿದ ಅಳಿಯನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಠಾಣೆ ಮುಖ್ಯಸ್ಥ ಯೋಗೇಂದ್ರ ಸಿಂಗ್ ಜಾಡೌನ್ ಹೇಳಿದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…