Latest

ವಿದ್ಯಾರ್ಥಿನಿಯರ ಕೈಯಲ್ಲಿ ಕಾರು ತೊಳಿಸಿದ ಶಿಕ್ಷಕಿ ಅಮಾನತ್ತು.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಂಗಂಪೇಟೆ ಮಂಡಲದ ವೆಂಕಟಾಪುರಂ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಘಟನೆ ವಿವಾದಕ್ಕೆ ಕಾರಣವಾಗಿದೆ. ಶಾಲೆಯ ಶಿಕ್ಷಕಿ ಡಿ. ಸುಶೀಲಾ ತಮ್ಮ ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಸ್ವಂತ ಕಾರಿನಲ್ಲಿ ಆಗಮಿಸಿದ್ದ ಸುಶೀಲಾ, ತಮ್ಮ ವಾಹನದ ಮೇಲೆ ಕೂಡಿದ್ದ ದೂಳನ್ನು ತೊಳೆಯಲು ವಿದ್ಯಾರ್ಥಿಗಳನ್ನು ಕೇಳಿಕೊಂಡರು. ಶಿಕ್ಷಕಿಯ ಆದೇಶ ಪಾಲಿಸಲು ಕೆಲವು ವಿದ್ಯಾರ್ಥಿನಿಯರು ಕಾರು ಸ್ವಚ್ಛಗೊಳಿಸಿದರು. ಈ ಸಂದರ್ಭ, ಆ ಕ್ಷಣಗಳನ್ನು ಅಲ್ಲಿದ್ದ ಇತರ ಶಿಕ್ಷಕರು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದು,  ವೀಡಿಯೋವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ, ಈ ಕುರಿತು ಶಾಲಾ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ವಿಚಾರಿಸಿದರು. ವಿಚಾರಣೆ ವೇಳೆ ವಿದ್ಯಾರ್ಥಿಗಳು, ಶಿಕ್ಷಕಿ ಅವರ ಮೇಲೆ ಒತ್ತಡ ಹೇರಿದ್ದು, ಅವರ ಮಾತಿಗೆ ಕಿವಿಗೊಡದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಶಾಲೆಯ ಸಮಯದಲ್ಲಿ ವೈಯಕ್ತಿಕ ಕೆಲಸಗಳನ್ನೂ ಮಾಡಿಸುತ್ತಿದ್ದರು ಎಂಬ ಆರೋಪವೂ ಕೇಳಿ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಶಿಕ್ಷಕಿಯನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದ್ದಾರೆ.  ಈ ಘಟನೆಯಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಶಿಕ್ಷಕಿಯ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಾಗ್ದಾಳಿ ನಡೆಯುತ್ತಿದೆ.

ಶಿಕ್ಷಕರ ಮುಖ್ಯ ಜವಾಬ್ದಾರಿ ಮಕ್ಕಳಿಗೆ ಪಾಠ ಕಲಿಸುವುದು, ಅವರ ಭವಿಷ್ಯ ರೂಪಿಸುವುದು. ಆದರೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳನ್ನು ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವ ಪ್ರವೃತ್ತಿ ಶೈಕ್ಷಣಿಕ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago