ಮುಂಡಗೋಡ: ತಾಲೂಕಿನ ಕೊಳಗಿ ಸನಿಹದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಮಳಗಿಯ ವಿದ್ಯಾರ್ಥಿಗಳು ಪಿಕ್ನಿಕ್ ಗೆ ಹೋಗಿದ್ದ ಟ್ರ್ಯಾಕ್ಟರ್ ಪಲ್ಟಿ ಆದ ಘಟನೆ ಶುಕ್ರವಾರ ಸಂಭವಿಸಿದೆ..
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಶಿರಸಿಯ ಟಿಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯಾ ಬ್ಯಾಡಗಿ (17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಅಪಘಾತದಲ್ಲಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಇದರಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಯರನ್ನು ಶಿರಸಿಯ ಟಿಎಸ್ಎಸ್ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಸಣ್ಣಪುಟ್ಟ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊಳಗಿ ಗ್ರಾಮದ ತೋಟವೊಂದಕ್ಕೆ ವಿದ್ಯಾರ್ಥಿಗಳನ್ನು ಪಿಕ್ನಿಕ್ ಗೆ ಕರೆದುಕೊಂಡು ಹೋಗಿ ಬರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಅತಿಥಿ ಉಪನ್ಯಾಸಕನೇ ಟ್ರ್ಯಾಕ್ಟರ್ ಚಾಲನೆಯನ್ನು ಮಾಡುತ್ತಿದ್ದರು ಎಂದ ತಿಳಿದು ಬಂದಿದೆ.
ಇಷ್ಟೆಲ್ಲ ಅವಘಡಗಳಿಗೆ ಕಾರಣರಾದ ಕಾಲೇಜಿನ ಪ್ರಾಂಶುಪಾಲರು ಮತ್ತು ನಿಷ್ಕಾಳಜಿ ತೋರಿದ ಉಪನ್ಯಾಸಕರಿಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪಾಲಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಮಂಜುನಾಥ ಹರಿಜನ
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…