Categories: CrimeLatest

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ವಾಕಿಂಗ್‌ಗೆ ಬಂದಿದ್ದ ಗ್ರಾಮಸ್ಥರು ದೇವಸ್ಥಾನದ ಸುತ್ತಮುತ್ತ ಸಂಚರಿಸುತ್ತಿದ್ದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಸುದ್ದಿ ತಿಳಿದ ತಕ್ಷಣ ಕೊರಟಗೆರೆ ತಹಶೀಲ್ದಾರರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನದ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ ಒಳನುಗ್ಗಿದ ದುಷ್ಕರ್ಮಿಗಳು ದೇವಿಯ ಅಲಂಕಾರಕ್ಕೆ ಬಳಸುತ್ತಿದ್ದ ಚಿನ್ನದ ಕಣ್ಣು, ಮಾಂಗಲ್ಯ ಹಾಗೂ ಸುಮಾರು 25ರಿಂದ 30 ಕೆಜಿ ತೂಕದ ಬೆಳ್ಳಿ ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ವಡ್ಡಗೆರೆ ವೀರನಾಗಮ್ಮ ದೇವಸ್ಥಾನವು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತರ ನಂಬಿಕೆಯ ಕೇಂದ್ರವಾಗಿದ್ದು, ಪ್ರತಿವರ್ಷ ಯುಗಾದಿ ಹಬ್ಬದ ಸಂದರ್ಭದಲ್ಲಿ ಇಲ್ಲಿ ಮೂರು ದಿನಗಳ ಕಾಲ ಭವ್ಯ ಜಾತ್ರೆ ನಡೆಯುತ್ತದೆ. ಈ ಜಾತ್ರೆಗೆ ಸುತ್ತಮುತ್ತಲಿನ ಗ್ರಾಮಗಳಷ್ಟೇ ಅಲ್ಲದೆ ಹೊರರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಾರೆ.

ಯುಗಾದಿ ಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರು ಹಾಗೂ ಭಕ್ತರಲ್ಲಿ ತೀವ್ರ ಆತಂಕ ಮತ್ತು ನೋವನ್ನುಂಟು ಮಾಡಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago