ದಾವಣಗೆರೆ: ದಾವಣಗೆರೆಯಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡುವ ಆದೇಶ ಹೊರಡಿಸಲಾಗಿದೆ.
ಜಾನುವರಿ 29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿರುವ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಕಳ್ಳತನವಾಗಿದ್ದವು. ಈ ಪ್ರಕರಣದ ರಾತ್ರಿ ಗಸ್ತು ಸೇವೆಗಾಗಿ ನಿಯೋಜಿಸಲಾದ ಮೂವರು ಕಾನ್ಸ್‌ಟೇಬಲ್‌ಗಳು ತಮ್ಮ ಕರ್ತವ್ಯದಲ್ಲಿ ಲೋಪ ತೋರಿರುವುದು ಇಲಾಖೆ ತನಿಖೆಯಲ್ಲಿ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸ್ ಠಾಣೆಯ ಟಿ. ಮಂಜಪ್ಪ, ಪಿ. ಆಕಾಶ್ ಹಾಗೂ ಆರ್.ಎಂ.ಸಿ ಠಾಣೆಯ ಹೆಚ್. ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರವಾದ ನಿರ್ಲಕ್ಷ್ಯ ತೋರಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮಗಳನ್ನು ಕೈಗೊಂಡಿದ್ದಾರೆ.
ನವದೆಹಲಿ: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಜಾರಿಗೆ ತಂದಿದೆ. ಟೆಲಿಕಾಂ ಕನ್ಸ್ಯೂಮರ್ ಪ್ರೊಟೆಕ್ಷನ್ (ಥರ್ಟೀನ್ತ್ ಅಮೆಂಡ್‌ಮೆಂಟ್)…
ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…
ಮಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…