ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹಳೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಕಳ್ಳತನದ ಘಟನೆ ನಡೆದಿದೆ. ತಡರಾತ್ರಿ ವೇಳೆ ಖದೀಮರು ರಸ್ತೆ ಬದಿಯ ಟೀ ಸ್ಟಾಲ್ ಮತ್ತು ಹೋಟೆಲ್‌ಗೆ ಬೀಗ ಮುರಿದು ನುಗ್ಗಿದ್ದು, ಹಲವು ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಅಕುಲ್ ಟೀ ಸ್ಟಾಲ್ ಹಾಗೂ ಸಮೀಪದ ಹೋಟೆಲ್‌ಗಾಗಿ ಗುರಿಯಾಗಿಸಿದ ಕಳ್ಳರು, ಗಲ್ಲಾ ಪೆಟ್ಟಿಗೆಯಲ್ಲಿದ್ದ ನಗದು ಹಣ, ಸಿಗರೇಟ್ ಪ್ಯಾಕೆಟ್‌ಗಳು ಹಾಗೂ ಚಾಕೊಲೇಟ್‌ಗಳನ್ನು ಎತ್ತಿಕೊಂಡು ಹೋಗಿದ್ದಾರೆ. ಆಶ್ಚರ್ಯಕರವಾಗಿ, ಹೋಟೆಲ್ ಒಳಗೆ ನುಗ್ಗಿದ ಖದೀಮರು ಅಡುಗೆ ಮಾಡಿ ಊಟ ಮಾಡಿ ಹೋಗಿರುವುದು ಗಮನ ಸೆಳೆದಿದೆ.
ಘಟನೆಯ ಮಾಹಿತಿ ಪಡೆದ ಮದ್ದೂರು ಟೌನ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಮುಂದುವರೆಸಿದ್ದಾರೆ. ಸ್ಥಳೀಯ ವ್ಯಾಪಾರಿಗಳು ಈ ಪ್ರಕರಣದಿಂದ ಆತಂಕಕ್ಕೊಳಗಾಗಿದ್ದು, ರಾತ್ರಿಯ ವೇಳೆ ಪೊಲೀಸ್ ಪೇಟ್ರೋಲಿಂಗ್ ಹೆಚ್ಚಿಸಬೇಕೆಂಬ ಬೇಡಿಕೆ ವ್ಯಕ್ತಪಡಿಸಿದ್ದಾರೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…