Crime

ಬಟ್ಟೆ ಅಂಗಡಿಯಲ್ಲಿ ಖರೀದಿ ನೆಪದಲ್ಲಿ ಹಣ ಕಳ್ಳತನ – ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ಖರೀದಿ ನೆಪದಲ್ಲಿ ಬಂದು ಗಲ್ಲೆಯಲ್ಲಿದ್ದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿ ಎಸ್ಕೇಪ್ ಆದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಘಟನೆಯ ವಿವರ: ಇಬ್ಬರು ಯುವ ಜೋಡಿಗಳು ಬಟ್ಟೆ ಖರೀದಿಗೆಂದು ಬಟ್ಟೆ ಅಂಗಡಿಗೆ ಫುಲ್ ಟಿಪ್‌ಟಫ್ ಆಗಿ ಬಂದು, ಯಾರೂ ಇಲ್ಲದ ಸಂದರ್ಭದಲ್ಲಿ ಗಲ್ಲೆಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಮಾಹಿತಿ ಪ್ರಕಾರ, ಈ ರೀತಿಯ ಕೃತ್ಯ ನಡೆಸುವುದು ಇವರ ವೃತ್ತಿಯಾಗಿದೆ.

ಈ ಬಾರಿ ಅವರು ಫ್ಲೈಯಿಂಗ್ ಮಷಿನ್ ಅಂಗಡಿಯಲ್ಲಿ 30 ಸಾವಿರ ರೂಪಾಯಿ ಕಳ್ಳತನ ಮಾಡಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಗಳನ್ನು ಅವಲೋಕಿಸಿದ ನಂತರ, ಅಂಗಡಿ ಮಾಲೀಕರು ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಸುಳಿವು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಅಂಗಡಿ ಮಾಲೀಕರು ಮತ್ತು ಸಾರ್ವಜನಿಕರು ಈ ರೀತಿಯ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago