ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ, ಮದಗಮ್ಮನ ಗುಡಿ ಹಾಗೂ ಹೊಳಿಯಪ್ಪ ಸರ್ಕಲ್ ನ ಮೂರು ಕಡೆಯಲ್ಲಿ ಶಾಸಕರ ಅನುದಾನದಲ್ಲಿ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿರುವ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ಇದುವರೆಗೂ ದೀಪ ಜೋಡಣೆಯಾಗಿರಲಿಲ್ಲ; ಈಗ ಲೈಟ್ ಗಳನ್ನು ಹಾಕಿದ್ದಾರೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿರುವುದಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ಸ್ಥಾಪಿಸಿದ್ದ ಹೈಮಾಸ್ಟ್ ಕಂಬಗಳು ಬೆಳಕಿಲ್ಲದೇ ಅಧಿಕಾರಿಗಳು, ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ.
ಹೀಗಾಗಿ ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿನಾಲೂ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಪತ್ರಿಕೆ ಸುದ್ಧಿ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಂಡು ವಿದ್ಯುತ್ ಸಂಪರ್ಕ ನೀಡಲಿಯೆಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.
ವರದಿ: ಮಣಿಕಂಠ. ಬಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…