Latest

ಕಂಬಗಳು ಇವೆ, ಲೈಟ್ ಗಳು ಇವೆ; ಆದರೆ ವಿದ್ಯುತ್ ಸಂಪರ್ಕವಿಲ್ಲ.

ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆ ಹತ್ತಿರ, ಮದಗಮ್ಮನ ಗುಡಿ ಹಾಗೂ ಹೊಳಿಯಪ್ಪ ಸರ್ಕಲ್ ನ ಮೂರು ಕಡೆಯಲ್ಲಿ ಶಾಸಕರ ಅನುದಾನದಲ್ಲಿ 2024 ರ ಮಾರ್ಚ್ ತಿಂಗಳಿನಲ್ಲಿ ನಿರ್ಮಿಸಲಾಗಿರುವ ಖಾಲಿ ಹೈ ಮಾಸ್ ಲೈಟ್ ಕಂಬಗಳಲ್ಲಿ ಇದುವರೆಗೂ ದೀಪ ಜೋಡಣೆಯಾಗಿರಲಿಲ್ಲ; ಈಗ ಲೈಟ್ ಗಳನ್ನು ಹಾಕಿದ್ದಾರೆ. ಆದರೆ ಇನ್ನೂ ವಿದ್ಯುತ್ ಸಂಪರ್ಕ ಕೊಟ್ಟಿರುವುದಿಲ್ಲ. ಸಾರ್ವಜನಿಕರಿಗೆ ಉಪಯೋಗವಾಗಲೆಂದು ಲಕ್ಷಾಂತರ ರೂ. ಖರ್ಚು ಮಾಡಿ ಸ್ಥಾಪಿಸಿದ್ದ ಹೈಮಾಸ್ಟ್‌ ಕಂಬಗಳು ಬೆಳಕಿಲ್ಲದೇ ಅಧಿಕಾರಿಗಳು, ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ನಿರುಪಯುಕ್ತವಾಗಿ ನಿಂತಿವೆ.
ಹೀಗಾಗಿ ನಿತ್ಯ ಅಲ್ಲಿ ಓಡಾಡುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ದಿನಾಲೂ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಪತ್ರಿಕೆ ಸುದ್ಧಿ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಂಡು ವಿದ್ಯುತ್ ಸಂಪರ್ಕ ನೀಡಲಿಯೆಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸಿದ್ದಾರೆ.

ವರದಿ: ಮಣಿಕಂಠ. ಬಿ

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

11 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

15 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

18 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

23 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago