Latest

ಮನೆಗೆ ನುಗ್ಗಿದ ಕಳ್ಳ ಅರೆಸ್ಟ್: 18 ಲಕ್ಷ ಮೌಲ್ಯದ ಆಭರಣ ವಶ..

ಹುಬ್ಬಳ್ಳಿ: ಮನೆಯಲ್ಲಿ ಯಾರೂ ಇಲ್ಲದ ವೇಳೆಯನ್ನು ಸದ್ಬಳಕೆ ಮಾಡಿಕೊಂಡು ಬಾಗಿಲು ಮುರಿದು ಬಂಗಾರದ ಆಭರಣಗಳನ್ನು ಕಳವು ಮಾಡಿಕೊಂಡಿದ್ದ ಕಳ್ಳನನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಇಸ್ಲಾಂಪೂರ್‌ನ ಗದಗಪುರ ಲೇಔಟ್ ಪ್ರದೇಶದಲ್ಲಿ ವಾಸವಿರುವ ಶಬೀರ್ ಗದಗಕರ್ ಅವರ ಮನೆಯಲ್ಲಿ ನಡೆದಿದ್ದ ಈ ಕಳ್ಳತನದ ಪ್ರಕರಣದಲ್ಲಿ ಸುಮಾರು 190 ಗ್ರಾಂ ಬಂಗಾರದ ಆಭರಣಗಳು ಕಳ್ಳತನವಾಗಿದ್ದವು. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೆತ್ತಿಕೊಂಡ ಕಸಬಾಪೇಟೆ ಠಾಣೆಯ ಪೊಲೀಸರು, ವಿಶೇಷ ತಂಡ ರಚಿಸಿ ಹತ್ತಿರದ ವರದಿಗಳನ್ನು ಶೋಧಿಸಿ ಆರೋಪಿಯನ್ನು ಪತ್ತೆ ಹಚ್ಚಿದರು.

ಇನ್ಸಪೆಕ್ಟರ್ ರಾಘವೇಂದ್ರ ಹೆಚ್. ಹಳ್ಳೂರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, 20 ವರ್ಷದ ಮುನ್ಸಬ್ಬಿರ್ ಗದಗಕರ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಕಳವುಗೊಂಡಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಎಎಸ್ಪಿ ಉಮೇಶ್ ಚಿಕ್ಕಮಠ್ ಅವರ ಮಾರ್ಗದರ್ಶನ ಇದ್ದು, ಇನ್ಸ್‌ಪೆಕ್ಟರ್ ರಾಘವೇಂದ್ರ ಹಳ್ಳೂರ ಅವರ ಜೊತೆಗೆ ಎಎಸ್‌ಐ ಸಿ.ಎಸ್. ಅಂಗಡಿ ಮತ್ತು ಸಿಬ್ಬಂದಿಗಳಾದ ಐ.ಕೆ. ಧಾರವಾಡ, ಬಿ.ಎಫ್. ಬೆಳಗಾವಿ, ಎಲ್.ವೈ. ಪಾಟೀಲ್, ಆರ್.ಎಸ್. ರಾಠೋಡ್, ಎಚ್.ಆರ್. ರಾಮಾಪುರ್, ಎಚ್.ಟಿ. ಬ್ಯಾಡಗಿ ಹಾಗೂ ಪಾಲಯ್ಯ ಎನ್ ಅವರು ಚುರುಕಾಗಿ ಭಾಗವಹಿಸಿದ್ದರು.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago