Latest

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರವನ್ನು ಕಸದಿಕೊಳ್ಳಲು ಬಂದಿದ್ದು ಆಕೆಯ ಸಮಯ ಪ್ರಜ್ಞೆಯಿಂದ ಜೋರಾಗಿ ಕಿರುಚಿದ್ದು 20 ಗ್ರಾಂ ನಷ್ಟು ಮಾತ್ರ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಲೀಲಾ, ಇಂದು ಬೆಳಗ್ಗೆ ಹಾಲು ತರಲು ನಮ್ಮ ಮನೆಯ ಪಕ್ಕದ ಅಂಗಡಿಗೆ ಹೋಗಿದ್ದೆ, ಆಗ ಹೆಲ್ಮೆಟ್ ಧರಿಸಿದ್ದ ಇಬ್ಬರು ಬೈಕ್ ನಲ್ಲಿ ಬಂದು ನನ್ನ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರವನ್ನು ಕಸದಿಕೊಳ್ಳಲು ಯತ್ನಿಸಿದ್ದರು, ಕತ್ತಿಗೆ ಕೈಹಾಕಿ ಎಳೆದಾಡಿದಾಗ ಚೈನ್ ಕಟ್ಟಾಗಿ 20 ಗ್ರಾಂ ನಷ್ಟು ಮಾತ್ರ ಅವರು ತೆಗೆದುಕೊಂಡು ಹೋಗಿದ್ದಾರೆ, ನನಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ಎಸ್.ಪಿ.ಜಗನ್ನಾಥ್ ರೈ, ಡಿವೈಎಸ್ಪಿ ಪ್ರಕಾಶ್ ರೆಡ್ಡಿ, ನಗರ ಠಾಣೆಯ ಪಿಎಸ್ಐ ಗೋಪಾಲ್, ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ಗರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವರ್ಷದ ಮೊದಲ ಹಬ್ಬದ ದಿನವೇ ಈ ರೀತಿಯ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಮತ್ತು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ್ದು ಹಗಲಿನಲ್ಲಿಯೇ ರಸ್ತೆಗಳಲ್ಲಿ ಈ ರೀತಿಯ ಕಳ್ಳತನಗಳು ನಡೆಯುತ್ತಿದ್ದರೆ ಸಾರ್ವಜನಿಕರು ನಿರ್ಭೀತಿಯಿಂದ ರಸ್ತೆಗಳಲ್ಲಿ ಸಂಚರಿಸುವುದು ಹೇಗೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

6 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

7 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

18 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

19 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

19 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

19 hours ago