ಮುಂಡಗೋಡ: ಪಟ್ಟಣದ ಜ್ಯುವೆಲರ್ಸ್ ಅಂಗಡಿಯೊಂದರಲ್ಲಿ ಇಬ್ಬರು ಕಳ್ಳರು ತಮ್ಮ ಕೈಚಳಕ ತೋರಿಸಿ ಬರೋಬ್ಬರಿ ₹1.30 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಪಟ್ಟಣದ ಶ್ರೀ ರಾಜಲಕ್ಷ್ಮೀ ಜ್ಯುವೆಲರ್ಸ್‌ನಲ್ಲಿ ಅಕ್ಟೋಬರ್ 17ರಂದು ಮಧ್ಯಾಹ್ನ 3.45ರಿಂದ 4.15ರ ನಡುವೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

ಅಂಗಡಿಯಲ್ಲಿದ್ದ ಸುಮಾರು 700 ಗ್ರಾಂ ತೂಕದ ನಾಲ್ಕು ಜೊತೆ ಬೆಳ್ಳಿ ಕಾಲುಚೈನ್‌ಗಳನ್ನು ಇಬ್ಬರು ಅಪರಿಚಿತರು ಅಂಗಡಿಯ ಸಿಬ್ಬಂದಿಗೆ ತಿಳಿಯದಂತೆ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳವಾದ ಆಭರಣಗಳ ಒಟ್ಟು ಮೌಲ್ಯ ಸುಮಾರು ₹1.30 ಲಕ್ಷ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 229/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 305ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related News

error: Content is protected !!