
ಗೌರಿಬಿದನೂರು: ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯಲ್ಲಿ ಹಾಡಹಗಲೇ ಕಳ್ಳರು ಕಾರಿನ ಗಾಜು ಒಡೆದು 12.20 ಲಕ್ಷ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಚೇನಹಳ್ಳಿ ತಾಲೂಕಿನ ನೂತನ್ ಎಂಬುವವರು ಯೂನಿಯನ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ನಿಂದ ಹಣವನ್ನು ಡ್ರಾ ಮಾಡಿಕೊಂಡು ತಮ್ಮ ಕಾರಿನ ಡ್ಯಾಶ್ಬೋರ್ಡ್ನಲ್ಲಿ ಇಟ್ಟುಕೊಂಡಿದ್ದರು. ಬಳಿಕ ಗೌರಿಬಿದನೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಫ್ರೆಶ್ ವರ್ಲ್ಡ್ ಮುಂಭಾಗ ಕಾರು ನಿಲ್ಲಿಸಿ, ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅಂಗಡಿಗೆ ತೆರಳಿದ್ದರು.
ಈ ವೇಳೆ ನೂತನ್ ಅವರನ್ನು ಕೆನರಾ ಬ್ಯಾಂಕ್ನಿಂದಲೇ ಹಿಂಬಾಲಿಸಿಕೊಂಡು ಬಂದಿದ್ದ ಕಳ್ಳರು, ಕಾರಿನ ಗಾಜನ್ನು ಒಡೆದು ಒಳಗಿದ್ದ 12.20 ಲಕ್ಷ ರೂ. ನಗದನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವೃತ್ತ ನಿರೀಕ್ಷಕ ಅಂಜನ್ ಕುಮಾರ್ ಹಾಗೂ ನಗರ ಠಾಣೆಯ ಪಿಎಸ್ಐ ವರಲಕ್ಷ್ಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವರದಿ: ಅವಿನಾಶ್






