ಕೋಲಾರ ಜಿಲ್ಲೆಯಲ್ಲಿ ಒಂಟಿ ಮಹಿಳೆಯರ ಮೇಲೆ ಕಣ್ಣಿಟ್ಟಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿ, ಸುಮಾರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರು ಶಶಿಧರ್ (ವಯಸ್ಸು 39), ಹರ್ಷಿತ್ (25) ಮತ್ತು ಸೂರ್ಯಪ್ರಕಾಶ್ (24) ಎಂದು ಗುರುತಿಸಲಾಗಿದ್ದು, ಇವರು ಕೋಲಾರ ನಗರ ಪೊಲೀಸ್ ಹಾಗೂ ಬಂಗಾರಪೇಟೆ ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿದ್ದರು ಎಂಬ ಆರೋಪಕ್ಕೆ ಒಳಪಟ್ಟಿದ್ದಾರೆ.
ಇವರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ವಿಶೇಷ ತನಿಖಾ ತಂಡವನ್ನು ರಚಿಸಿ, ನಿರಂತರ ಶೋಧ ಕಾರ್ಯ ನಡೆಸಿದ ಫಲಿತಾಂಶವಾಗಿ ಆರೋಪಿಗಳನ್ನು ಹಿಡಿಯಲು ಸಾಧ್ಯವಾಯಿತು. ತನಿಖೆಯ ಮುಂದುವರೆದಂತೆ, ಆರೋಪಿಗಳಿಂದ 95 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಕೃತ್ಯದಲ್ಲಿ ಬಳಸಲಾದ ಎರಡು ಹೊಂಡಾ ಶೈನ್ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಇಲಾಖೆ ಆರೋಪಿಗಳ ಹಿಂದಿನ ಕ್ರಿಮಿನಲ್ ಹಿನ್ನಲೆಯ ಬಗ್ಗೆ ಇನ್ನೂ ತನಿಖೆ ಮುಂದುವರಿಸಿದೆ. ಮಹಿಳೆಯರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…