Latest

ಪತ್ನಿ ಮತ್ತು ಮಾವನಿಂದ ಹಲ್ಲೆ ಆರೋಪ: ತಿಪ್ಪನಗೌಡ ಪಾಟೀಲ್ ದೂರು

ಹುಬ್ಬಳ್ಳಿ: “ಮನೆಗೆ ಬೇಕಾದ ಎಲ್ಲವನ್ನೂ ತಂದುಕೊಟ್ಟಿದ್ದರೂ, ನನ್ನದೇ ಮೇಲೆ ನಿಂದನೆ ಹಾಗೂ ಹಲ್ಲೆ ನಡೆದಿದೆ” ಎಂಬ ಗಂಭೀರ ಆರೋಪವನ್ನು ತಿಪ್ಪನಗೌಡ ಪಾಟೀಲ್ ಎಂಬವರು ದಾಖಲಿಸಿದ್ದು, ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾರಿಹಾಳ ಬಳಿಯ ರಾಮನಗರ ನಿವಾಸಿಯಾದ ತಿಪ್ಪನಗೌಡ ಪಾಟೀಲ್ ಅವರು ದೂರು ನೀಡಿರುವ ಪ್ರಕಾರ, ತಮ್ಮ ಪತ್ನಿ ಗೀತಾ ಮತ್ತು ಮಾವ ಶಂಕ್ರಪ್ಪ ಸವದತ್ತಿ ಇಬ್ಬರೂ ಸೇರಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಕಿರಾಣಿ ಸಾಮಗ್ರಿ ತರುವ ಕುರಿತು ಮಾತುಳಿದಾಗ ಗೀತಾ ಮತ್ತು ಶಂಕ್ರಪ್ಪ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ದೈಹಿಕವಾಗಿ ದೌರ್ಜನ್ಯ ಎಸಗಿದರೆಂದು ದೂರಿನಲ್ಲಿ ತಿಳಿಸಿದ್ದಾರೆ.

“ನಾನು ಮನೆಗೆ ಬೇಕಾದ ವಸ್ತುಗಳನ್ನು ಎಲ್ಲವನ್ನೂ ತಂದುಕೊಡುತ್ತಿದ್ದರೂ, ಹಣ ನೀಡುತ್ತಿಲ್ಲ ಎಂದು ನನ್ನನ್ನು ಅಪಮಾನದ ಪದಗಳಲ್ಲಿ ನಿಂದಿಸುತ್ತಿದ್ದಾರೆ. ನಾನು ಏಕೆ ಬೈಯುತ್ತೀರಿ ಎಂದು ಕೇಳಿದ್ದಕ್ಕಷ್ಟೇ ಹಲ್ಲೆ ನಡೆಸಲಾಯಿತು” ಎಂಬುದಾಗಿ ತಿಪ್ಪನಗೌಡ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

1 hour ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

1 hour ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

1 hour ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

2 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago