Latest

ಲೋಕಾಯುಕ್ತ ಅಧಿಕಾರಿಯ ಹೆಸರಿನಲ್ಲಿ ಬೆದರಿಕೆ ಕರೆ – ಆರ್‌ಟಿಒಗೆ ಹಣಕ್ಕೆ ಬೇಡಿಕೆ

ತುಮಕೂರು ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಎ.ವಿ. ಪ್ರಸಾದ್ ಅವರಿಗೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂದು ಗುರುತಿಸಿಕೊಂಡ ಅಪರಿಚಿತ ವ್ಯಕ್ತಿ ವಾಟ್ಸ್‌ಆ್ಯಪ್‌ ಕರೆ ಮೂಲಕ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರಸಾದ್ ಅವರು ಲಭ್ಯವಾಗಿಸಿದ ಮಾಹಿತಿಯಂತೆ, ಕೆಲ ದಿನಗಳ ಹಿಂದೆ ಅನಾಮಧೇಯ ವ್ಯಕ್ತಿ ‘ನಾನು ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ’ ಎಂದು ಪರಿಚಯಿಸಿಕೊಂಡು ಕರೆ ಮಾಡಿದ್ದ. “ಮತ್ತು 10 ನಿಮಿಷಗಳಲ್ಲಿ ನಮ್ಮ ಎಡಿಜಿಪಿ ನಿಮಗೆ ಕರೆಮಾಡುತ್ತಾರೆ. ನಿಮ್ಮ ಕಚೇರಿಯ ಮೇಲೆ ದಾಳಿ ಮಾಡಲು ಅಗತ್ಯ ದಾಖಲೆಗಳು ಸಿದ್ಧವಾಗಿದೆ. ₹1 ಲಕ್ಷ ಹಣ ತಕ್ಷಣವೇ ವರ್ಗಾವಣೆ ಮಾಡಿದರೆ ದಾಳಿ ನಿಲ್ಲಿಸುತ್ತದೆ” ಎಂಬುವಾಗಿ ಬೆದರಿಸಿದ್ದಾನೆ.

ಆರ್‌ಟಿಒ ಪ್ರಸಾದ್ ಅವರು ಘಟನೆ ಬಗ್ಗೆ ಅನುಮಾನ ಹೊಂದಿ ತಕ್ಷಣವೇ ಕರೆ ಕಟ್ ಮಾಡಿ, ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಅವರ ದೂರಿನ ಆಧಾರದಲ್ಲಿ ತುಮಕೂರು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರಿ ಅಧಿಕಾರಿಯ ಹೆಸರಿನಲ್ಲಿ ನಕಲಿ ಕರೆಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಸಾದ್ ಅವರು ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದು, ನಕಲಿ ಕರೆಮಾಡಿದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

13 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago