Categories: CrimeLatest

ಮಹಿಳೆಯ ಖಾಸಗಿ ವಿಡಿಯೋ ಬಳಸಿ ಬೆದರಿಕೆ, ಕಿರುಕುಳ: ಆರೋಪಿಗೆ 6 ತಿಂಗಳ ಜೈಲು ಶಿಕ್ಷೆ, ₹5 ಸಾವಿರ ದಂಡ

ಭಟ್ಕಳ:ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಭಟ್ಕಳ ತಾಲೂಕಿನ ನಿವಾಸಿ ಆಂಟೋನಿ (30), ತಂದೆ ಜೋಸೆಫ್ ಎಂಬಾತ ಮಹಿಳೆಯೊಬ್ಬರಿಗೆ ಕಿರುಕುಳ ನೀಡುವುದರ ಜೊತೆಗೆ ಅವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ ದುರುಪಯೋಗಪಡಿಸಿಕೊಂಡಿದ್ದ ಆರೋಪ ಎದುರಿಸುತ್ತಿದ್ದ.

ಈ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಗುನ್ನಾ ನಂ. 97/2023ರ ಅಡಿಯಲ್ಲಿ ಐಪಿಸಿ ಕಲಂ 354(ಎ), 354(ಡಿ), 509 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 67ರ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು.

ಸಮಗ್ರ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಕೆ

ಪ್ರಕರಣದ ತನಿಖೆ ಕೈಗೊಂಡಿದ್ದ ಅಂದಿನ ಮುರ್ಡೇಶ್ವರ ವೃತ್ತದ ಸಿಪಿಐ ಸಂತೋಷ್ ಕಾಯ್ಕಿಣಿ ಅವರು ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು. ಬಳಿಕ ಆರೋಪಿತನ ವಿರುದ್ಧ ಭಟ್ಕಳದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಭಟ್ಕಳದ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಸಿ ನಂ. 567/2024ರ ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರೂಪಶ್ರೀ ಅವರು ಆಂಟೋನಿಗೆ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಯಶಸ್ಸಿಗೆ ಪೊಲೀಸ್ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ

ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಪುಟ್ಟಲಕ್ಷ್ಮಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖೆಗೆ ಸಹಕಾರ ನೀಡಿದ ಸಿಎಚ್‌ಸಿ-1188 ಸುಬ್ರಹ್ಮಣ್ಯ, ಸಿಪಿಸಿ-767 ಸಿದ್ದಪ್ಪ ಹಾಗೂ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ ಮಹಿಳಾ ಎಚ್‌ಸಿ-1601 ವನಿತಾ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.

ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ ತನಿಖಾಧಿಕಾರಿ ಸೇರಿದಂತೆ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.

ಮಹಿಳೆಯರಿಗೆ ಪೊಲೀಸ್ ಇಲಾಖೆಯ ಮನವಿ

ಮಹಿಳೆಯರ ಮೇಲೆ ನಡೆಯುವ ಕಿರುಕುಳ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸುತ್ತದೆ.

ಇಂತಹ ಘಟನೆಗಳಿಗೆ ಒಳಗಾದ ಮಹಿಳೆಯರು ಭಯಪಡದೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ವರದಿ: ಮಂಜುನಾಥ್ ಮೊಗೇರ

ಭ್ರಷ್ಟರ ಬೇಟೆ

Recent Posts

ಮಾದನಬಾವಿ ಗೋಶಾಲೆಯ ದುಸ್ಥಿತಿಗೆ ಆಕ್ರೋಶ: ಗೋವುಗಳಿಗೆ ಮೇವು, ನೀರು ಹಾಗೂ ಚಿಕಿತ್ಸೆ ಒದಗಿಸಲು ಆಗ್ರಹ

ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…

5 hours ago

ಮುಂಡಗೋಡದ ರಾಜಲಕ್ಷ್ಮಿ ಜ್ಯುವೆಲ್ಲರ್ಸ್‌ನಲ್ಲಿ ಬೆಳ್ಳಿ ಆಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…

5 hours ago

ಫೋನ್‌ಪೇ ಹಣ ಪಾವತಿ ನಕಲಿ ಸಂದೇಶ ತೋರಿಸಿ ಮೊಬೈಲ್ ವಂಚನೆ: ಬೆಂಗಳೂರಿನಲ್ಲಿ ಆರೋಪಿಯ ಬಂಧನ

ಕುಮಟಾ: ಮೊಬೈಲ್ ಖರೀದಿಸಿ ಫೋನ್‌ಪೇ ಮೂಲಕ ಹಣ ಪಾವತಿಸಿರುವುದಾಗಿ ನಕಲಿ ಸಂದೇಶ ತೋರಿಸಿ ಅಂಗಡಿ ಮಾಲೀಕರಿಗೆ ವಂಚಿಸಿ ಪರಾರಿಯಾಗಿದ್ದ ಆರೋಪಿಯನ್ನು…

5 hours ago

ಮಾರ್ಚ್ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಿ: ಸಿಇಒ ಡಾ. ದಿಲೀಷ್ ಶಶಿ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು (MVS) ಯೋಜನೆಯ ಕಾಮಗಾರಿಯನ್ನು ಉತ್ತರ…

5 hours ago

ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ: ಪತ್ನಿ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಪತಿ!

ಕೌಟುಂಬಿಕ ಕಲಹಕ್ಕೆ ಏಳು ಜೀವಗಳ ಬಲಿ; ಕ್ಯಾಬ್ ಚಾಲಕ ಇಂದುಶೇಖರ್ ಬಂಧನ, ವಿಚಾರಣೆಯಲ್ಲಿ ಬಯಲಾಯ್ತು ನರಮೇಧದ ರಹಸ್ಯ ಬೆಂಗಳೂರು: ಸಿಲಿಕಾನ್…

2 days ago

ಟೈಗರ್ ಶ್ರಾಫ್‌ಗೆ ಸಂಬಂಧಿಸಿದ ಗುಂಡಿನ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹರಿಯಾಣದ 22 ವರ್ಷದ ಯುವತಿ ಅರೆಸ್ಟ್!

ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೈವಾಡದ ಶಂಕೆ ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ…

2 days ago