Crime

ಬಾಲ್ಯ ವಿವಾಹ ಆದವರಿಗೆ ಬೆದರಿಕೆ; ಯೂಟ್ಯೂಬ್ ಚಾನಲ್ ವರದಿಗಾರ ಅಂದರ್!

ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ.

2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ                                                                                                            ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.                                                                                                                                                                                      164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್‌ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಪ್ರಕರಣ ಮುಚ್ಚಲು ಹಣದ ಬೇಡಿಕೆ:  ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು.  ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago