ಹಾವೇರಿ ಜಿಲ್ಲೆಯಲ್ಲಿ 2024ರಲ್ಲಿ ದಾಖಲಾಗಿದ್ದ ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣದಲ್ಲಿ ಹಣಕ್ಕಾಗಿ ಬೇಡಿಕೆ ಹಾಕಿ ಸಂತ್ರಸ್ತೆಗೆ ಬೆದರಿಕೆ ಒಡ್ಡಿದ ಆರೋಪದಡಿ, ಹಿರೇಕೆರೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಅವರು ನೀಡಿದ ಮಾಹಿತಿಯ ಪ್ರಕಾರ, ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಇಬ್ಬರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ವಾರೆಂಟ್ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಪವನ್ ಮತ್ತು ಮಹದೇವಪ್ಪ ಮಾಳಮ್ಮನವರನ್ನು ಬಂಧಿಸಿದ್ದಾರೆ. ಎರಡೂ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2024ರಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆ ಹಿರೇಕೆರೂರು ಠಾಣೆಯಲ್ಲಿ ಬಾಲಕಿಯ ಮಾವ (ತಾಯಿಯ ತಮ್ಮ) ನೀಡಿದ ದೂರಿನ ಮೇರೆಗೆ 2024ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಾಲಕಿಯನ್ನು ಬಾಲ್ಯವಿವಾಹ ಮಾಡಿಕೊಂಡ ಯುವಕ, ಅವರ ಕುಟುಂಬದವರು ಹಾಗೂ ಬಾಲಕಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿತ್ತು. ಎಲ್ಲಾ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. 164ರಡಿ ಬಾಲಕಿಯ ಹೇಳಿಕೆ: ಬಾಲಕಿಯು ಇತ್ತೀಚೆಗೆ ನ್ಯಾಯಾಲಯದಲ್ಲಿ ತನ್ನ ಹೇಳಿಕೆ (ಸಿಆರ್‌ಪಿಸಿ 164ರಡಿ) ದಾಖಲಿಸಿದ್ದಾರೆ. ಈ ಹೇಳಿಕೆಯ ಆಧಾರದ ಮೇಲೆ ನ್ಯಾಯಾಲಯವು ವಾರೆಂಟ್ ಜಾರಿಗೊಳಿಸಿತ್ತು. ಅಲ್ಲದೆ, ಪ್ರಕರಣದಲ್ಲಿ ಆರೋಪಿಯಲ್ಲೊಬ್ಬ ಮಹಿಳೆ ಸ್ವಯಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪ್ರಕರಣ ಮುಚ್ಚಲು ಹಣದ ಬೇಡಿಕೆ: ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಾಲ್ಯವಿವಾಹದ ಪ್ರಕರಣ ಕುರಿತು “ಯೂಟ್ಯೂಬ್ ಚಾನೆಲ್” ವರದಿಗಾರನೆಂದು ತಾನು ಹೇಳಿಕೊಂಡಿದ್ದ ಪವನ್, ಈ ವಿಷಯ ತಿಳಿದು, ಇತರೆ ಆರೋಪಿಗಳೊಂದಿಗೆ ಯುವಕನ ಮನೆಗೆ ಹೋಗಿದ್ದ.
ಅವರು, “ಬಾಲ್ಯವಿವಾಹ ಕಾನೂನುಬಾಹಿರ. ಮನೆಯವರು ಕೋರ್ಟ್-ಕಚೇರಿಯಲ್ಲಿ ಓಡಾಡಬೇಕಾಗುತ್ತದೆ. ನಾವು ಮಧ್ಯವರ್ತಿಗಳಾಗಿ ಕೆಲಸ ಮಾಡಿ ಪ್ರಕರಣವನ್ನು ರಾಜಿ ಮಾಡಿಸುತ್ತೇವೆ” ಎಂದು ಯುವಕನಿಂದ ಹಣ ಪಡೆದಿದ್ದರು.
ಇನ್ನು, ಎರಡನೇ ಬಾರಿ ಮತ್ತೆ ಹಣ ಕೇಳಲು ಯುವಕನ ಮನೆಗೆ ತೆರಳಿದಾಗ, ಯುವಕ ಈ ಕುರಿತು ಬಾಲಕಿಯೊಂದಿಗೆ ಮಾತನಾಡಿದ್ದ. ಅಲ್ಲಿ ಬಾಲಕಿ ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಯುವಕನಿಗೆ ಬೆದರಿಕೆ ಹಾಕಿ, “ಹಣ ಕೊಟ್ಟರೆ ಮಾತ್ರ ಪ್ರಕರಣ ಮುಗಿಯುತ್ತದೆ, ಇಲ್ಲದಿದ್ದರೆ ಎಲ್ಲರಿಗೂ ತೊಂದರೆ ಆಗುತ್ತದೆ” ಎಂದಿದ್ದರು. ಬಾಲಕಿಯು ಈ ವಿಚಾರವನ್ನು ತನ್ನ ನ್ಯಾಯಾಲಯದ ಹೇಳಿಕೆಯಲ್ಲಿ ದಾಖಲಿಸಿದ್ದರಿಂದ, ಆರೋಪಿಗಳ ಬಂಧನಕ್ಕೆ ಆಧಾರ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…