ಹುಬ್ಬಳ್ಳಿ: ನಗರದ ಎಪಿಎಂಸಿ ಈಶ್ವರನಗರ, ಸಮೃದ್ಧಿ ಬಡಾವಣೆ, ಎಸ್.ಆರ್ ನಗರ, ಅಂಕೋಲೆಕರ್ ಲೇಔಟ್ ಮತ್ತು ಎಂ.ಐ.ಜಿ ಕಾಲನಿಗಳಲ್ಲಿ ನಡೆದ ಸರಣಿ ಮನೆ ಕಳ್ಳತನ ಪ್ರಕರಣದಲ್ಲಿ ಮೂವರನ್ನು ಬಂಧಿಸಿ, ಓರ್ವ ಅಪ್ರಾಪ್ತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಕಳ್ಳತನ ಹಾಗೂ ವಶಪಡಿಸಿಕೊಂಡ ಸರಕುಗಳು
2024ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಲ್ಲಿ ಈ ಭಾಗದಲ್ಲಿ ಸರಣಿ ಕಳ್ಳತನಗಳು ನಡೆದಿದ್ದವು. ತನಿಖೆ ನಡೆಸಿದ ಎಪಿಎಂಸಿ ನವನಗರ ಠಾಣೆ ಪೊಲೀಸರು ಸಿದ್ದಪ್ಪ ಅಂಬಿಗೇರ, ವಿಷ್ಣು ಅಂಬಿಗೇರ ಮತ್ತು ಕುನಾಲಸಿಂಗ್ ಎಂಬುವವರನ್ನು ಬಂಧಿಸಿದ್ದಾರೆ. ಈಚೆಗೆ ಬಂಧಿತರಿಂದ 60 ಗ್ರಾಂ ತೂಕದ ಬಂಗಾರ (ರೂ. 4,50,000 ಮೌಲ್ಯ), 360 ಗ್ರಾಂ ತೂಕದ ಬೆಳ್ಳಿ ಆಭರಣ (ರೂ. 37,000 ಮೌಲ್ಯ) ಮತ್ತು ಕಳ್ಳತನಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಕಾರ್ಯಾಚರಣೆ
ಈ ಕಾರ್ಯಾಚರಣೆಯನ್ನು ಎಪಿಎಂಸಿ ನವನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸಮಿವುಲ್ಲಾ ಕೆ. ಅವರ ನೇತೃತ್ವದಲ್ಲಿ ಪಿಎಸ್‌ಐ ದೇವೇಂದ್ರ ಮಾವಿನಿಂಡಿ, ಎಂ.ಬಿ ಈಟಿ ಹಾಗೂ ಸಿಬ್ಬಂದಿಗಳಾದ ರವಿ ಆರ್. ಹೊಸಮನಿ, ಬೀರನೂರ, ಸಿ.ವೈ. ಬಕ್ಕಸದ, ಬಿ.ಎಸ್. ಮನ್ನೂರ ಮತ್ತು ತಾಂತ್ರಿಕ ವಿಭಾಗದ ಎಂ.ಎಸ್. ಚಿಕ್ಕಮಠ, ಆರ್.ಕೆ. ಭಡಂಕರ, ರವಿ ಗೋಮಪ್ಪನವರ ನಡೆಸಿದರು.
ಪೊಲೀಸರ ಕಾರ್ಯಚರಣೆ ಯಶಸ್ವಿಯಾಗಿದ್ದು, ಸ್ಥಳೀಯ ನಿವಾಸಿಗಳು ತೋಂದರೆಮುಕ್ತರಾಗಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…