ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.

ವಂಚನೆ ಪ್ರಕರಣದ ತನಿಖೆ ಸಂಬಂಧ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಮಾಹಿತಿ ನೀಡದೇ ಅಸ್ಸಾಂ ರಾಜ್ಯಕ್ಕೆ ತೆರಳಿದ್ದ ಹಿನ್ನೆಲೆ ಪಿಎಸ್ಐ ಸಾಗರ್ ಅಸ್ಕಿ, ಎಎಸ್ಐ ಚಂದ್ರಶೇಖರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮಾಹಿತಿಯ ಪ್ರಕಾರ, ಅಸ್ಸಾಂ ಪೊಲೀಸರು ಈ ಕುರಿತು ತುಮಕೂರು ಎಸ್‌ಪಿ ಅವರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಡಿವೈಎಸ್ಪಿ, ಎಎಸ್‌ಪಿ ಹಾಗೂ ಎಸ್‌ಪಿ ಅವರ ಗಮನಕ್ಕೆ ತರದೇ ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ವಲಯ ಐಜಿಪಿ ಗಿರೀಶ್ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Related News

error: Content is protected !!