ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.
ವಂಚನೆ ಪ್ರಕರಣದ ತನಿಖೆ ಸಂಬಂಧ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೇ ಹಾಗೂ ಮಾಹಿತಿ ನೀಡದೇ ಅಸ್ಸಾಂ ರಾಜ್ಯಕ್ಕೆ ತೆರಳಿದ್ದ ಹಿನ್ನೆಲೆ ಪಿಎಸ್ಐ ಸಾಗರ್ ಅಸ್ಕಿ, ಎಎಸ್ಐ ಚಂದ್ರಶೇಖರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ರಂಗಧಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಮಾಹಿತಿಯ ಪ್ರಕಾರ, ಅಸ್ಸಾಂ ಪೊಲೀಸರು ಈ ಕುರಿತು ತುಮಕೂರು ಎಸ್‌ಪಿ ಅವರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಡಿವೈಎಸ್ಪಿ, ಎಎಸ್‌ಪಿ ಹಾಗೂ ಎಸ್‌ಪಿ ಅವರ ಗಮನಕ್ಕೆ ತರದೇ ಅಧಿಕಾರ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ವಲಯ ಐಜಿಪಿ ಗಿರೀಶ್ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…