Categories: CrimeLatest

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು ಸಿನಿಮಾದಂತೆಯೇ ಯೋಜಿತವಾಗಿ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಏಪ್ರಿಲ್ 14ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಗುಗದಡ್ಡಿ ಗ್ರಾಮದ ನಿವಾಸಿ ರಾಜು ಖರಿ ಅವರು ತಮ್ಮ ಥಾರ್ ಜೀಪಿನಲ್ಲಿ ವಿಜಯಪುರದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದ ಬಳಿ ಟಿಪ್ಪರ್ ಟ್ರಕ್ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿಯ ತೀವ್ರತೆಗೆ ಜೀಪ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದರೂ, ರಾಜು ಬದುಕುಳಿದಿದ್ದರು.

ಆದರೆ, ಅಪಘಾತದ ನಂತರ ಸ್ಥಳಕ್ಕೆ ಧಾವಿಸಿದ ಹಂತಕರು ಜೀಪ್ ಡೋರ್‌ನ್ನು ದೊಡ್ಡ ಕಲ್ಲಿನಿಂದ ಒಡೆದು, ರಾಜು ಅವರ ತಲೆ ಹಾಗೂ ಎದೆ ಭಾಗಕ್ಕೆ ಕಂಟ್ರಿ ಪಿಸ್ತೂಲ್ ಬಳಸಿ ಆರು ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮೃತನ ಸಹೋದರ ನೀಡಿದ ದೂರಿನ ಆಧಾರದಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ, ಮಾರಕಾಯುಧ ಬಳಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸಿ, ಅಬುಶ್ಯಾ ಕೊಡ್ಲೇಕರ್ (36), ಅಬಾಶ್ಯಾ ಮಾನೆ (35), ವಾಗೀಶ್ (31), ಜಲಿಂದರ್ (29), ಅಜಿತ್ (29) ಮತ್ತು ಮುರಗು (24) ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.

ತನಿಖೆಯಲ್ಲಿ, ಪ್ರಮುಖ ಆರೋಪಿ ಅಬುಶ್ಯಾ ಕೊಡ್ಲೇಕರ್ ಮತ್ತು ರಾಜು ಖರಿ ನಡುವೆ ಇದ್ದ ಆಸ್ತಿ ವಿವಾದವೇ ಹತ್ಯೆಗೆ ಕಾರಣವಾಗಿದ್ದು, ಕೊಲೆಗೆ ಎರಡು ದಿನಗಳ ಮೊದಲು ಟಿಪ್ಪರ್ ಟ್ರಕ್ ಖರೀದಿಸಿ ಸಂಚು ರೂಪಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago