Latest

“ಸಾಲು ಸಾಲು ತೆರಿಗೆ ನೋಟಿಸ್‌ಗಳಿಗೆ ಬೇಸತ್ತ ವ್ಯಾಪಾರಿಗಳು: ಜುಲೈ 25 ರಂದು ರಾಜ್ಯಾದ್ಯಂತ ಬಂದ್”

ಬೆಂಗಳೂರು, ಜುಲೈ 18: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬೇಕರಿ, ಕಾಂಡಿಮೆಂಟ್ಸ್, ಚಹಾ ಹಾಗೂ ಹಾಲು ಅಂಗಡಿಗಳ ಮಾಲೀಕರು ಯುಪಿಐ ವಹಿವಾಟಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್‌ಗಳನ್ನು ಪಡೆದಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಹೂವಿನ ವ್ಯಾಪಾರಿಗಳಿಗೆ 52 ಲಕ್ಷದ ತೆರಿಗೆ ನೋಟಿಸ್ ನೀಡಲಾಗಿದ್ದರೆ, ಇದೀಗ ಸುಮಾರು 40 ಲಕ್ಷ ರೂಪಾಯಿಯ ವಹಿವಾಟು ನಡೆಸಿದ ಬೇಕರಿ ಮತ್ತು ಕಾಂಡಿಮೆಂಟ್ಸ್ ಅಂಗಡಿಗಳಿಗೆ ಸಹ ನೋಟಿಸ್ ನೀಡಲಾಗಿದೆ. ಪಾವತಿ ಮಾಡದಿದ್ದರೆ ಜುಲೈ 21ರೊಳಗೆ ಬ್ಯಾಂಕ್ ಖಾತೆ ಮುಟ್ಟುಗೋಲು ಮಾಡುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಈ ಪರಿಸ್ಥಿತಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅಂಗಡಿ ಮಾಲೀಕರು ಜುಲೈ 25ರಂದು ರಾಜ್ಯಮಟ್ಟದ ಬಂದ್‌ಗೆ ಕರೆ ನೀಡಿದ್ದಾರೆ. ಇದೇ ಹಿನ್ನಲೆಯಲ್ಲಿ ಜುಲೈ 23ರಿಂದ 25ರ ವರೆಗೆ ಹಂತ ಹಂತವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಹಂತ ಹಂತದ ಹೋರಾಟ ಯೋಜನೆ:

ಜುಲೈ 23 ಹಾಗೂ 24:
ಗುಟ್ಕಾ ಹಾಗೂ ಸಿಗರೇಟು ಮಾರಾಟ ಸಂಪೂರ್ಣವಾಗಿ ನಿಲ್ಲಿಸಲಾಗುವುದು.

ಜುಲೈ 24:
ಹಲವಾರು ಹಾಲು ಉತ್ಪನ್ನ ಅಂಗಡಿಗಳು ಹಾಗೂ ಚಹಾ ಅಂಗಡಿಗಳು ಸಹ ಭಾಗವಹಿಸುವ ಸಾಧ್ಯತೆ ಇದೆ.

ಜುಲೈ 25:
ರಾಜ್ಯದಾದ್ಯಾಂತ ಕಾಂಡಿಮೆಂಟ್ಸ್, ಬೇಕರಿ, ಚಹಾ, ಬೀಡಿ ಅಂಗಡಿಗಳು ಸಂಪೂರ್ಣ ಬಂದ್ ಆಗಲಿವೆ. ಕೆಲ ತರಕಾರಿ ಅಂಗಡಿಗಳೂ ಸಹ ಬಾಗಿಲು ಮುಚ್ಚುವ ಸಾಧ್ಯತೆ ಇದೆ.

ವ್ಯಾಪಾರಿಗಳ ಆಕ್ರೋಶ:
ರಾಜ್ಯ ಕಾರ್ಮಿಕ ಪರಿಷತ್‌ ಅಧ್ಯಕ್ಷ ರವಿ ಶೆಟ್ಟಿ ಬೈಂದೂರ್ ಮಾತನಾಡುತ್ತಾ, “ಬಡವರು ಸಾಲ ಮಾಡಿಬಿಡುವಂಥ ಪರಿಸ್ಥಿತಿಯಲ್ಲಿ ಇವೆ. ಹಾಲು, ಬ್ರೆಡ್‌, ಹಣ್ಣು, ತರಕಾರಿ ಮಾರಾಟ ಮಾಡುವವರು ವಾಣಿಜ್ಯ ತೆರಿಗೆಯ ವ್ಯಾಪ್ತಿಗೆ ಬಾರದಿರಬೇಕು. ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಹೀಗಾಗಿ ಸರ್ಕಾರ ಈ ತೆರಿಗೆ ನೋಟಿಸ್ ಹಿಂಪಡೆಯಬೇಕು” ಎಂದು ಮನವಿ ಮಾಡಿದರು.

ಸದ್ಯದ ಪರಿಸ್ಥಿತಿಯಲ್ಲಿ 60 ರಿಂದ 65 ಸಾವಿರ ಅಂಗಡಿಗಳಿಗೆ ನೋಟಿಸ್ ತಲುಪಿರುವ ಹಿನ್ನೆಲೆಯಲ್ಲಿ, ಈ ಹೋರಾಟ ವಿಸ್ತಾರಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಸ್ಪಂದಿಸದ ಹಂಚೆಯಲ್ಲಿ, ಭವಿಷ್ಯದಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಯಲಿದೆ ಎಂಬ ಎಚ್ಚರಿಕೆಯೂ ವ್ಯಾಪಾರಿಗಳಿಂದ ಹೊರಬಿದ್ದಿದೆ.

nazeer ahamad

Recent Posts

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

15 minutes ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

4 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

17 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago