Latest

ಹುಬ್ಬಳ್ಳಿಯಲ್ಲಿ ಪೈಪ್‌ಲೈನ್ ಕಾಮಗಾರಿಯಲ್ಲಿ ದುರಂತ: ಮಣ್ಣು ಕುಸಿತದಿಂದ ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿದ್ದ ಪೈಪ್‌ಲೈನ್ ಕಾಮಗಾರಿಯ ವೇಳೆ ಭೀಕರ ದುರಂತ ಸಂಭವಿಸಿದ್ದು, ಮಣ್ಣು ಕುಸಿತದಿಂದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆ ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ಗುರುವಾರ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು 35 ವರ್ಷದ ಚೇತನ್ ಜಾಧವ್ ಎಂದು ಗುರುತಿಸಲಾಗಿದೆ. ಚೇತನ್ ಹುಬ್ಬಳ್ಳಿಯ ತಾಜನಗರ್ ನಿವಾಸಿಯಾಗಿದ್ದ. ಇನ್ನೊಬ್ಬ ಗಾಯಗೊಂಡ ಕಾರ್ಮಿಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಎಲ್ ಅಂಡ್ ಟಿ (L&T) ಕಂಪನಿಗೆ ಈ ಯೋಜನೆಯ ಗುತ್ತಿಗೆ ನೀಡಲಾಗಿದೆ. ಕಾಮಗಾರಿಯ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯದಿಂದ ಕೆಲಸ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಉದ್ಭವವಾಗಿವೆ.

ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,  ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಬಳಿಕ ಪಾಲಿಕೆ ಹಾಗೂ ಗುತ್ತಿಗೆದಾರ ಸಂಸ್ಥೆ ಎಲ್ ಅಂಡ್ ಟಿ ಮೇಲ್ನೋಟದಲ್ಲಿ ಇದ್ದರೂ ನಿರ್ಲಕ್ಷ್ಯತೆಯೊಂದಿಗೆ ಕಾಮಗಾರಿ ನಡೆಸುತ್ತಿರುವುದರ ಪರಿಣಾಮ ಈ ರೀತಿಯ ದುರಂತಗಳು ಸಂಭವಿಸುತ್ತಿವೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

4 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago