Categories: Latest

ಬಾಂದ್ರಾದಲ್ಲಿ ದುರ್ಘಟನೆ: ಹಣ್ಣು ಸೇವಿಸಿದ ಬಳಿಕ ತಾಯಿ-ಮೂರು ಮಕ್ಕಳು ಸಾವು, ವಿಷಾಹಾರದ ಶಂಕೆ

ಮುಂಬೈ: ಮಹಾರಾಷ್ಟ್ರದ ಬಾಂದ್ರಾ ಪೂರ್ವದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳು ಮೃತಪಟ್ಟಿದ್ದು, ಇಡೀ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕುಟುಂಬದವರು ರಾತ್ರಿ ಬಿರಿಯಾನಿ ಸೇವಿಸಿದ ನಂತರ ಕಲ್ಲಂಗಡಿ ಹಣ್ಣು ತಿಂದಿದ್ದಾರೆ. ಆದರೆ ಹಣ್ಣು ಸೇವಿಸಿದ ಕೆಲವೇ ಸಮಯದಲ್ಲಿ ನಾಲ್ವರಿಗೂ ತೀವ್ರ ವಾಂತಿ ಮತ್ತು ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಾಲ್ವರೂ ಮೃತಪಟ್ಟಿದ್ದಾರೆ.

ಈ ಪ್ರಕರಣದಲ್ಲಿ ವಿಷಾಹಾರದ ಶಂಕೆ ವ್ಯಕ್ತವಾಗಿದ್ದು, ಇದು ‘ಫುಡ್ ಪಾಯಿಸನಿಂಗ್’ ಆಗಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ವಿಶೇಷವಾಗಿ ಕಲ್ಲಂಗಡಿ ಹಣ್ಣು ಸೇವನೆಯೇ ಸಾವಿಗೆ ಕಾರಣವೇ? ಅಥವಾ ಹಣ್ಣು ಬೇಗ ಹಣ್ಣಾಗಲು ಬಳಸಲಾಗುವ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಪರಿಣಾಮವೇ? ಎಂಬ ಕುರಿತು ತನಿಖೆ ನಡೆಯುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ಮಧ್ಯೆ ವೈದ್ಯಕೀಯ ತಜ್ಞರು ಎಚ್ಚರಿಕೆ ನೀಡಿದ್ದು, ಹಣ್ಣುಗಳು ಆಕರ್ಷಕವಾಗಿ ಕಾಣಲು ಮತ್ತು ಬೇಗ ಹಣ್ಣಾಗಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸುವ ಪ್ರಕ್ರಿಯೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಇಂತಹ ಕೃತಕವಾಗಿ ಹಣ್ಣಾಗಿಸಿದ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದ್ದರಿಂದ ಸಾರ್ವಜನಿಕರು ಆಹಾರ ಮತ್ತು ಹಣ್ಣುಗಳನ್ನು ಖರೀದಿಸುವಾಗ ಹಾಗೂ ಸೇವಿಸುವಾಗ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ಎಂದು ಸಲಹೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 hour ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago