Latest

ಭದ್ರಾ ಜಲಾಶಯದಲ್ಲಿ ದುರಂತ: ಮಗನ ಜೊತೆಗೆ ತಂದೆಯೂ ನೀರುಪಾಲು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯದಲ್ಲಿ ಭಾನುವಾರ (ಏಪ್ರಿಲ್ 20) ದುರಂತ ಘಟನೆ ಸಂಭವಿಸಿದ್ದು, ಮಗನನ್ನು ರಕ್ಷಿಸಲು ಹೋಗಿ ತಂದೆಯೂ ನೀರುಪಾಲಾದಿದ್ದಾರೆ.

ಭದ್ರಾವತಿ ಪಟ್ಟಣದ ಭೂತನಗುಡಿಯ ನಿವಾಸಿ ಮಹಮ್ಮದ್ ಜಾಬಿರ್ ಅವರು ತಮ್ಮ 14 ವರ್ಷದ ಮಗ ಮಹಮ್ಮದ್ ಜವಾದ್ ಹಾಗೂ ಕುಟುಂಬದೊಂದಿಗೆ ಭದ್ರಾ ಜಲಾಶಯಕ್ಕೆ ವಿಹಾರಕ್ಕೆ ಬಂದಿದ್ದರು. ಊಟದ ಬಳಿಕ ಜವಾದ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದ. ಆದರೆ ನೀರಿನ ಆಳತೆಯನ್ನು ಗಮನಿಸದ ಕಾರಣ, ಅವನು ನೀರಲ್ಲಿ ಮುಳುಗಿದನು.

ಆತನನ್ನು ರಕ್ಷಿಸಲು ತಂದೆ ಜಾಬಿರ್ ಕೂಡ ನೀರಿಗೆ ಜಿಗಿದರೂ, ಆವರಿಗೂ ನೀರಿನಿಂದ ಹೊರಬರಲು ಸಾಧ್ಯವಾಗಲಿಲ್ಲ. ಸ್ಥಳೀಯರು ಮತ್ತು ರಕ್ಷಕ ತಂಡಗಳು ಧಾವಿಸಿ ಜವಾದ್ ಶವವನ್ನು ಮಧ್ಯರಾತ್ರಿಯಲ್ಲಿ ಪತ್ತೆ ಹಚ್ಚಿದರೆ, ತಂದೆ ಜಾಬಿರ್ ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಬಳಿಕ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾಬಿರ್ ಪತ್ತೆಯಾಗಿ ಹೊರಬರುವವರೆಗೆ ಶೋಧ ಕಾರ್ಯ ಮುಂದುವರೆದಿದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago