Categories: CrimeLatest

ಹಿರೇಬಿದನೂರಿನಲ್ಲಿ ದುರಂತ: ಕಾಮಗಾರಿ ಸ್ಥಳದ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು

ಗೌರಿಬಿದನೂರು ತಾಲೂಕಿನ ಹಿರೇಬಿದನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಸ್ಥಳದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಜಪಾಲ್ ಮತ್ತು ಶ್ವೇತಾ ದಂಪತಿಯ ಮಗಳು ಪಲ್ಲವಿ (1.5) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಕಾಮಗಾರಿ ಪ್ರದೇಶದಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಆಳವಾದ ಗುಂಡಿಯನ್ನು ತೋಡಲಾಗಿತ್ತು. ಇತ್ತೀಚಿನ ಮಳೆಯಿಂದಾಗಿ ಆ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರೂ, ಅದರ ಸುತ್ತ ಯಾವುದೇ ಸುರಕ್ಷತಾ ಬೇಲಿ, ಎಚ್ಚರಿಕೆ ಫಲಕ ಅಥವಾ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಟವಾಡುತ್ತಿದ್ದ ವೇಳೆ ಮಗು ಪಲ್ಲವಿ ನೀರು ತುಂಬಿದ್ದ ಗುಂಡಿಗೆ ಜಾರಿ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಮಗುವಿನ ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಜೀವನೋಪಾಯಕ್ಕಾಗಿ ದೂರದ ಊರಿನಿಂದ ಗೌರಿಬಿದನೂರಿಗೆ ಬಂದಿದ್ದ ಕುಟುಂಬಕ್ಕೆ ಸ್ಥಳೀಯವಾಗಿ ಸಂಬಂಧಿಕರು ಅಥವಾ ಬೆಂಬಲ ಇಲ್ಲದ ಕಾರಣ, ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿ ಮುಂಭಾಗ ಕುಟುಂಬದವರ ಆಕ್ರಂದನ ಮನಕಲಕುವಂತಿತ್ತು. ಈ ದೃಶ್ಯ ಕಂಡ ಸಾರ್ವಜನಿಕರು ಕುಟುಂಬದ ನೋವಿಗೆ ಸ್ಪಂದಿಸಿದರು.

ಸ್ಥಳೀಯರು ಮತ್ತು ಸಾರ್ವಜನಿಕರು ಮಾತನಾಡಿ, ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದರೆ ಈ ಅಮಾಯಕ ಮಗುವಿನ ಜೀವ ಉಳಿಯಬಹುದಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆದಾರರ ನಿರ್ಲಕ್ಷ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

ಮೃತ ಮಗುವಿನ ಕುಟುಂಬಕ್ಕೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರ ಮತ್ತು ಮೇಲ್ವಿಚಾರಣೆ ಹೊತ್ತ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಘಟನೆ ನಿರ್ಮಾಣ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ನೆನಪಿಸಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

4 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

19 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

23 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago