Latest

ರೈಲ್ವೆ ಹಳಿಗಳಲ್ಲಿ ದುರಂತ: ಗೌರಿಬಿದನೂರಿನಲ್ಲಿ ಇಬ್ಬರ ಶವ ಪತ್ತೆ, ತನಿಖೆ ಆರಂಭ

ಗೌರಿಬಿದನೂರು ಪಟ್ಟಣದ ನಾಗಪ್ಪ ಬ್ಲಾಕ್ ಬಳಿಯ ರೈಲ್ವೆ ಹಳಿಗಳಲ್ಲಿ ಭಾನುವಾರ ಎರಡು ಶವಗಳು ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಇದರಲ್ಲಿ ಒಬ್ಬ ವ್ಯಕ್ತಿಯ ಗುರುತುಗಿದ್ದರೆ, ಇನ್ನೊಬ್ಬರು ಅಜ್ಞಾತರಾಗಿದ್ದಾರೆ.

ಮೃತರಲ್ಲಿ ಒಬ್ಬರನ್ನು ನಾಗಪ್ಪ ಬ್ಲಾಕ್ ಹಿಂಭಾಗದಿಂದ ಪತ್ತೆಯಾದ ಶವದ ಅಧಾರದಲ್ಲಿ ನವೀನ್ ಕುಮಾರ್ (ವಯಸ್ಸು 36) ಎಂದು ಗುರುತಿಸಲಾಗಿದೆ. ಮತ್ತೊಂದು ಶವವು ಕಲ್ಲೂಡಿ ಸಮೀಪದ ಹಳಿಯಲ್ಲಿ ಪತ್ತೆಯಾಗಿದೆ. ಈ ಶವದ ಗುರುತು ಇನ್ನೂ ಬಹಿರಂಗವಾಗಿಲ್ಲ.

ಸ್ಥಳಕ್ಕೆ ದೌಡಾಯಿಸಿದ ದೊಡ್ಡಬಳ್ಳಾಪುರ ರೈಲ್ವೇ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಪೋಸ್ಟ್ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಿ, ಘಟನೆಗೆ ಕಾರಣ ಪತ್ತೆಹಚ್ಚುವ ದಿಸೆಯಲ್ಲಿ ತನಿಖೆ ಆರಂಭಿಸಿದೆ.

ಈ ಇಬ್ಬರ ಮರಣದ ಹಿಂದಿರುವ ನಿಖರ ಕಾರಣವಿತ್ತೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತವೋ ಅಥವಾ ಇತರ ಕಾರಣವೋ ಎಂಬುದರ ಕುರಿತು ಅಧಿಕಾರಿಗಳು ಎಲ್ಲ ಸಂಭಾವ್ಯ ಕೋನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago