Categories: CrimeLatest

ಮದುವೆಯ ಸಂಭ್ರಮ ಮುಗಿಯುವ ಮುನ್ನವೇ ದುರಂತ: ಗೆಳೆಯನ ಕರೆ ಎಂದು ಹೊರಟ ನವವಿವಾಹಿತನ ಬರ್ಬರ ಹತ್ಯೆ

ಬಳ್ಳಾರಿ: ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಕೆಲವೇ ಗಂಟೆಗಳಲ್ಲಿ ಆಘಾತ ಎದುರಾಗಿದೆ. ರಿಸೆಪ್ಷನ್ ಕಾರ್ಯಕ್ರಮ ಮುಗಿಸಿ ಗೆಳೆಯನ ಕರೆ ಬಂದಿದೆ ಎಂದು ಮನೆಯಿಂದ ಹೊರಟ ನವವಿವಾಹಿತ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿ ನಗರದ 29ನೇ ವಾರ್ಡ್‌ನ ಬಟ್ಟಿ ಏರಿಯಾ ಸಮತಾ ನಗರದಲ್ಲಿ ನಡೆದಿದೆ.

ಮೃತನನ್ನು ನಬಿ ರಸೂಲ್ ಎಂದು ಗುರುತಿಸಲಾಗಿದೆ. ಅವರು ಬೋಟಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದುದರ ಜೊತೆಗೆ ಗಾರೆ ಕೆಲಸವನ್ನೂ ಮಾಡುತ್ತಿದ್ದರು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 15 ದಿನಗಳ ಹಿಂದೆ ವಿಚ್ಛೇದನ ಪಡೆದಿದ್ದ ಮಹಿಳೆಯನ್ನು ನಬಿ ರಸೂಲ್ ಪ್ರೀತಿಸಿ ಕರೆದುಕೊಂಡು ಹೋಗಿದ್ದರು. ಬಳಿಕ ಇಬ್ಬರೂ ಮನೆಗೆ ಮರಳಿದ್ದು, ಕುಟುಂಬದವರ ಒಪ್ಪಿಗೆಯೊಂದಿಗೆ ಗುರುವಾರ ಮದುವೆ ಹಾಗೂ ಅದೇ ದಿನ ಸಂಜೆ ರಿಸೆಪ್ಷನ್ ಕಾರ್ಯಕ್ರಮವನ್ನು ಸಂಭ್ರಮದಿಂದ ನೆರವೇರಿಸಲಾಗಿತ್ತು.

ರಾತ್ರಿ ಸುಮಾರು 11.30ರ ವೇಳೆಗೆ ಗೆಳೆಯನಿಂದ ಕರೆ ಬಂದಿದೆ ಎಂದು ಹೇಳಿ ನಬಿ ರಸೂಲ್ ಮನೆಯಿಂದ ಹೊರಟಿದ್ದರು. ಆದರೆ ಅವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಹುಡುಕಾಟ ಆರಂಭಿಸಿದ ಬಳಿಕ, ತಡರಾತ್ರಿ ಸುಮಾರು 2 ಗಂಟೆ ವೇಳೆಗೆ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ರಕ್ತದ ಮಡುವಿನಲ್ಲಿ ಅವರ ಶವ ಪತ್ತೆಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ಡಿವೈಎಸ್‌ಪಿ ಸ್ವನದಾಳ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳ ಮಹಜರು ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತನಿಖೆ ಆರಂಭಿಸಿದ್ದಾರೆ.

ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪ್ರೇಮ ವಿವಾಹದ ಹಿನ್ನೆಲೆ, ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳಿವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮದುವೆಯಾದ ಕೆಲವೇ ಗಂಟೆಗಳಲ್ಲಿ ನವವಿವಾಹಿತನ ಬರ್ಬರ ಹತ್ಯೆ ನಡೆದಿರುವ ಈ ಘಟನೆ ಬಳ್ಳಾರಿ ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕುಟುಂಬದವರ ಆಕ್ರಂದನ ಮನಕಲಕುವಂತಿದೆ.

– ವರದಿ: ಹನುಮಂತ

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago