Latest

ಪೈಪ್‌ಲೈನ್‌ ಕಾಮಗಾರಿಯಲ್ಲಿ ಭೀಕರ ದುರ್ಘಟನೆ: ಮಣ್ಣು ಕುಸಿತದಿಂದ ಇಬ್ಬರು ಸಾವು, ಒಬ್ಬರು ನಾಪತ್ತೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪಕ್ಕದ ನ್ಯೂ ಗಾಂಧಿ ನಗರದಲ್ಲಿ ಬುಧವಾರ ಸಂಭವಿಸಿದ ಭೀಕರ ಅವಘಡದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮಣ್ಣುಕೆಳಗೆ ಹೂತು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಗೋಕಾಕ ಮೂಲದ ಈ ಕಾರ್ಮಿಕರು ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪೈಪ್‌ ಲೈನ್‌ಗಾಗಿ ಜೆಸಿಬಿಯಿಂದ ಎತ್ತಿದ ಹೊಂಡದಲ್ಲಿ ಕೆಲಸ ನಿರತವಾಗಿದ್ದ ಸಂದರ್ಭದಲ್ಲಿ ಅಚ್ಚಾನೇಕಾಗಿ ಮಣ್ಣು ಕುಸಿದಿದ್ದು, ಕಾರ್ಮಿಕರು ಅದರೊಳಗೆ ಸಿಲುಕಿ ಬಿದ್ದರು. ಪರಿಣಾಮವಾಗಿ ಅವರು ಸ್ಥಳದಲ್ಲೇ ಉಸಿರುಗಟ್ಟಿದ್ದಾರೆ.

ಇನ್ನು ಮತ್ತೊಬ್ಬ ಕಾರ್ಮಿಕನು ಈ ಅವಘಡದ ಬಳಿಕದಿಂದ ನಾಪತ್ತೆಯಾಗಿದ್ದು, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡ ಆತನು ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾದ ವ್ಯಕ್ತಿಗಾಗಿ ಶೋಧ ಮುಂದುವರೆದಿದ್ದು, ಸ್ಥಳದಲ್ಲಿ ಅಗ್ನಿಶಾಮಕದಳದ ಕಾರ್ಯಚರಣೆ ಮುಂದುವರಿದಿದೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

6 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

10 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

13 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago