Latest

ಅಥಣಿಯಲ್ಲಿ ದಾರುಣ ದುರ್ಘಟನೆ: ಎತ್ತಿನಗಾಡಿ ಹಳ್ಳಕ್ಕೆ ಮಗುಚಿ ಇಬ್ಬರು ಬಾಲಕರು, ಎತ್ತು ನೀರುಪಾಲು

ಬೆಳಗಾವಿ, ಮೇ 28: ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಜೀವಹಾನಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಂಭವಿಸಿದ ಆಘಾತಕಾರಿ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ನಾಗನೂರ ಪಿಎ ಗ್ರಾಮದ ಬಳಿ ಎರಡು ಪುಟ್ಟ ಜೀವಗಳು ಮಳೆಪಾತದ ಹಿನ್ನಲೆಯಲ್ಲಿ ಹಳ್ಳದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸಹೋದರರು ಹಾಗೂ ಒಂದು ಎತ್ತು ಸಾವನ್ನಪ್ಪಿದ್ದಾರೆ.

ಘಟನೆ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಹತ್ತಿರದ ಸಂಬರಗಿ ಗ್ರಾಮದ ಅಗ್ರಾಣಿ ಹಳ್ಳವು ಮಳೆ ನೀರಿನಿಂದ ಉಕ್ಕಿ ಹರಿಯುತ್ತಿತ್ತು. ಈ ಹಳ್ಳ ದಾಟಲು ಎತ್ತಿನಗಾಡಿ ಬಳಸಲಾಗುತ್ತಿದ್ದು, ಅದೇ ಮೂಲಕ ದೀಪಕ ಕಾಂಬಳೆ (9) ಹಾಗೂ ಗಣೇಶ ಕಾಂಬಳೆ (7) ಎಂಬ ಸಹೋದರರು ಪ್ರಯಾಣಿಸುತ್ತಿದ್ದರು. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ದಾರಿ ಕಾಣದೇ ಎತ್ತಿನಗಾಡಿ ಕಳಚಿ ಬಿದ್ದು, ಇಬ್ಬರು ಮಕ್ಕಳು ಹಾಗೂ ಎತ್ತು ನೀರಿಗೆ ಕೊಚ್ಚಿ ಹೋಗಿದ್ದಾರೆ.

ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ಈ ಘಟನೆಗೂ ಕಾರಣವಾಗಿದ್ದು – ಹಳ್ಳದಲ್ಲಿ ಸೇತುವೆಯ ಕೊರತೆ. ವರ್ಷದಿಂದ ವರ್ಷಕ್ಕೆ ಮಳೆಗಾಲದಲ್ಲಿ ಇದೇ ಸಮಸ್ಯೆಯು ಗ್ರಾಮಸ್ಥರ ಮುಂದೆ ಎದುರಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಮಳೆಗಾಲದಲ್ಲಿ ಇಂಥ ದುರ್ಘಟನೆಗಳ ಹಿಂದೆ ಮೂಲಭೂತ ಸೌಕರ್ಯಗಳ ಕೊರತೆ ದೊಡ್ಡ ಪಾತ್ರವಹಿಸುತ್ತಿರುವುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಆಗ್ರಹವು ಮೂಡುತ್ತಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

13 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago