Categories: CrimeLatest

ಗುಟ್ಟಾಗಿ ಮದುವೆಯಾಗಿದ್ದ ಪ್ರೇಮಿಗಳ ದುರಂತ ಅಂತ್ಯ: ಯುವತಿಯ ಕೊಲೆ ಆರೋಪದಲ್ಲಿ ಪ್ರೇಮಿ ಪೊಲೀಸ್ ವಶಕ್ಕೆ

ಬೆಂಗಳೂರು: ಪ್ರೇಮ ಸಂಬಂಧ, ಗುಟ್ಟಿನ ಮದುವೆ ಹಾಗೂ ಕುಟುಂಬದ ವಿರೋಧದ ನಡುವೆ ಯುವತಿಯೊಬ್ಬಳು ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯ ತುಳಸಿನಗರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರೇಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ಯುವತಿಯನ್ನು 22 ವರ್ಷದ ಭವಾನಿ ಎಂದು ಗುರುತಿಸಲಾಗಿದೆ. ಮೊಬೈಲ್ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಭವಾನಿಗೆ ಚಂದ್ರಶೇಖರ್ ಅಲಿಯಾಸ್ ಚಂದನ್ ಎಂಬಾತನ ಪರಿಚಯವಾಗಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ತನಿಖೆ ವೇಳೆ ಚಂದನ್ ಈಗಾಗಲೇ ವಿವಾಹಿತನಾಗಿದ್ದು, ಪತ್ನಿ ಹಾಗೂ ಆರು ವರ್ಷದ ಮಗುವನ್ನು ಹೊಂದಿದ್ದರೂ, ಸುಮಾರು ಒಂದು ವರ್ಷದ ಹಿಂದೆ ಭವಾನಿಯನ್ನು ಗುಟ್ಟಾಗಿ ವಿವಾಹವಾಗಿದ್ದ ಮಾಹಿತಿ ಬಹಿರಂಗವಾಗಿದೆ. ಈ ವಿಚಾರ ಇಬ್ಬರ ಕುಟುಂಬದವರಿಗೂ ಹಾಗೂ ಆಪ್ತರಿಗೂ ತಿಳಿದಿರಲಿಲ್ಲ ಎಂದು ಹೇಳಲಾಗಿದೆ.

ಇತ್ತೀಚೆಗೆ ಭವಾನಿಯ ಕುಟುಂಬಸ್ಥರು ಆಕೆಗೆ ಬೇರೆ ಸಂಬಂಧ ನೋಡಿದ್ದು, ಮುಂದಿನ ವಾರ ನಿಶ್ಚಿತಾರ್ಥ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ವಿಷಯವನ್ನು ಭವಾನಿ ತನ್ನ ಪ್ರೇಮಿ ಚಂದನ್‌ಗೆ ತಿಳಿಸಿದ್ದಳು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭವಾನಿ ವಾಸವಿದ್ದ ಕೊಠಡಿಯಲ್ಲಿ ಮಾತುಕತೆ ನಡೆದಿದ್ದು, ಅದು ವಾಗ್ವಾದಕ್ಕೆ ತಿರುಗಿದೆ. ಬಳಿಕ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ವಿಷ ಸೇವಿಸಿದ ನಂತರ ಭವಾನಿ ವಾಂತಿ ಮಾಡಿಕೊಂಡಿದ್ದು, ಈ ವೇಳೆ ಚಂದನ್ ಆಕೆಯ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆಯ ಬಳಿಕ ಚಂದನ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭವಾನಿಯೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು “ಒಂದು ವರ್ಷದ ಆ್ಯನಿವರ್ಸರಿ” ಎಂಬ ಶೀರ್ಷಿಕೆಯೊಂದಿಗೆ ಸ್ಟೋರಿ ಹಾಕಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಭವಾನಿಯ ಸಂಬಂಧಿಕರು ಸ್ಕ್ರೀನ್‌ಶಾಟ್ ತೆಗೆದು ಆಕೆಯ ತಂದೆ ಶ್ರೀನಿವಾಸ್ ಅವರಿಗೆ ಮಾಹಿತಿ ನೀಡಿದ್ದಾರೆ.

ಮಗಳು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನೆ ಮಾಲೀಕರನ್ನು ಸಂಪರ್ಕಿಸಿದ್ದು, ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಭವಾನಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅದೇ ವೇಳೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಚಂದನ್ ಕೂಡ ಸ್ಥಳದಲ್ಲಿದ್ದನು. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಪೊಲೀಸರು ಚಂದನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿರುವ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭವಾನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

17 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago