Categories: CrimeLatest

ಮದುವೆಯಾಗಿ ಒಂದೂವರೆ ತಿಂಗಳಲ್ಲೇ ದುರಂತ ಅಂತ್ಯ: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು!

ಶಿವಮೊಗ್ಗ: ಇನ್ನೂ ದಾಂಪತ್ಯ ಜೀವನದ ಸಂಭ್ರಮದಲ್ಲಿದ್ದ ನವಜೋಡಿಯ ಬದುಕಿನಲ್ಲಿ ವಿಧಿ ಕ್ರೂರ ಆಟವಾಡಿದೆ. ಮದುವೆಯಾಗಿ ಕೇವಲ ಒಂದೂವರೆ ತಿಂಗಳಷ್ಟೇ ಕಳೆದಿದ್ದ ದಂಪತಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಸಾಗರ ರಸ್ತೆ ಸಮೀಪದ ರಿಂಗ್ ರೋಡ್‌ನಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಿರಣ್ ಜಿ. (28) ಹಾಗೂ ಅವರ ಪತ್ನಿ ಸೌಮ್ಯ (22) ಎಂದು ಗುರುತಿಸಲಾಗಿದೆ. ಕಿರಣ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಕಿರಣ್ ಅವರು ಪತ್ನಿ ಸೌಮ್ಯ ಅವರೊಂದಿಗೆ ಶರಾವತಿ ನಗರದ ಮನೆಯಿಂದ ಗೋವಿಂದಪುರದಲ್ಲಿರುವ ಪತ್ನಿಯ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾಗರ ರಸ್ತೆ ಸಮೀಪದ ರಿಂಗ್ ರೋಡ್‌ನಲ್ಲಿ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಬಿದ್ದ ದಂಪತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಹೊಸ ಬದುಕಿನ ಕನಸು ಕಾಣುತ್ತಿದ್ದ ಜೋಡಿ ಮದುವೆಯಾದ ಒಂದೂವರೆ ತಿಂಗಳಲ್ಲೇ ಸಾವಿನ ಮನೆ ಸೇರಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಒಟ್ಟಿಗೆ ಅಂತ್ಯಸಂಸ್ಕಾರ:

ಘಟನೆಯ ಬಳಿಕ ಕೆಲ ಗೊಂದಲಗಳು ಹಾಗೂ ಭಿನ್ನಾಭಿಪ್ರಾಯಗಳು ಎದುರಾದರೂ, ಅಂತಿಮವಾಗಿ ದಂಪತಿಯ ಅಂತ್ಯಸಂಸ್ಕಾರವನ್ನು ಒಟ್ಟಿಗೆ ಶರಾವತಿ ನಗರದ ಸ್ಮಶಾನದಲ್ಲಿ ನೆರವೇರಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ನೀರು ಕೇಳುವ ನೆಪದಲ್ಲಿ ಮಹಿಳೆಯ ಚಿನ್ನದ ಸರ ಕಳವು: ಬಿಳಿ ಕಾರಿನಲ್ಲಿ ಬಂದ ಖದೀಮರು ಪರಾರಿ!

ಮುಂಡಗೋಡ: ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ ಗಮನ ಬೇರೆಡೆ ಸೆಳೆದ ದುಷ್ಕರ್ಮಿಗಳು, ಆಕೆಯ…

1 hour ago

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಂಚದಡಿ ಅಡಗಿ ಬಂದು ಅನುಚಿತ ವರ್ತನೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಹಾವೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಕರಿಗೆ ಚಿಕಿತ್ಸೆ ಕೊಡಿಸಲು ಜಿಲ್ಲಾಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರಿಗೆ ಆಸ್ಪತ್ರೆಯಲ್ಲೇ ಕಹಿ ಅನುಭವ ಎದುರಾಗಿದೆ. ರಾತ್ರಿ ವೇಳೆ…

1 hour ago

ಮುಂಡಗೋಡದಲ್ಲಿ ಅರಣ್ಯಾಧಿಕಾರಿಗಳ ದಾಳಿ: ಮನೆಯಲ್ಲಿ 35 ಕೆ.ಜಿ ಕಾಡುಹಂದಿ ಮಾಂಸ ಪತ್ತೆ, ಓರ್ವ ಅರೆಸ್ಟ್; ಮತ್ತೊಬ್ಬ ಪರಾರಿ!

ಮುಂಡಗೋಡ: ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಹಂದಿ ಮಾಂಸವನ್ನು ತುಂಡುಗಳಾಗಿ ವಿಂಗಡಿಸಿ ಅಡುಗೆ ತಯಾರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

2 days ago

ಬಡವರ ಸ್ವಂತ ಮನೆ ಕನಸು ನನಸಾಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್; ಶೇ.50 ರಿಯಾಯಿತಿಯಲ್ಲಿ 30X40 ಅಡಿ ನಿವೇಶನ!

ಕರ್ನಾಟಕದಲ್ಲಿ ಸ್ವಂತ ಮನೆ ಹಾಗೂ ನಿವೇಶನ ಹೊಂದುವ ಕನಸು ಕಾಣುತ್ತಿರುವ ಬಡ ಮತ್ತು ಶ್ರಮಿಕ ವರ್ಗದ ಜನರಿಗೆ ರಾಜ್ಯ ಸರ್ಕಾರ…

4 days ago

ಡಿವೋರ್ಸ್ ಪೇಪರ್‌ಗೆ ಸಹಿ ಹಾಕುವ ಕೊನೇ ಕ್ಷಣದಲ್ಲಿ ಬದಲಾದ ಪತ್ನಿಯ ಮನಸ್ಸು; ಪತಿಯ ಒಂದು ನಡೆಗೆ ಓಡೋಡಿ ಬಂದು ತಬ್ಬಿಕೊಂಡಳು!

ವಿಚ್ಛೇದನದ ಮೂಲಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದ ದಂಪತಿ, ಕೊನೆಯ ಕ್ಷಣದಲ್ಲಿ ಮತ್ತೆ ಒಂದಾದ ಅಪರೂಪದ ಘಟನೆ ಇದೀಗ…

4 days ago

ಗೃಹಲಕ್ಷ್ಮಿ ಹಣದ ಆಸೆಗೆ ಅಜ್ಜಿಯನ್ನೇ ಕೊಂದ ಮೊಮ್ಮಗ: ಶವವನ್ನು ಡ್ಯಾಂಗೆ ಎಸೆದು ನಾಟಕವಾಡಿದ್ದ ಆರೋಪಿ ಬಂಧನ!

ಬೆಳಗಾವಿ: ಹೆತ್ತವರ ಪ್ರೀತಿಯಂತೆ ಮೊಮ್ಮಗನನ್ನು ಸಾಕಿ ಬೆಳೆಸಿದ್ದ ಅಜ್ಜಿಯನ್ನೇ ಹಣದ ಆಸೆಗೆ ಮೊಮ್ಮಗ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ…

4 days ago