Categories: CrimeLatest

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ ಚಟ ಮತ್ತು ಆಸ್ತಿ ವಿಚಾರದ ಜಗಳ ಕೊನೆಗೆ ಹೆತ್ತ ತಾಯಿಯ ಜೀವವನ್ನೇ ಬಲಿತೆಗೆದುಕೊಂಡಿದೆ.

75 ವರ್ಷದ ಜಯಮ್ಮ ಕೊಲೆಯಾದ ವೃದ್ಧೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಗಳು ಭಾಗ್ಯಲಕ್ಷ್ಮಿ ಹಾಗೂ ಮೊಮ್ಮಗ ಕುಶಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಈ ಕುಟುಂಬದಲ್ಲಿ ಮದ್ಯಪಾನದ ಚಟ ಗಂಭೀರ ಮಟ್ಟಕ್ಕೆ ತಲುಪಿತ್ತು. ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಆಸ್ತಿ ಮಾರಾಟದ ಹಣದ ವಿಚಾರವಾಗಿ ಜಯಮ್ಮ ಮತ್ತು ಮಗಳು ಭಾಗ್ಯಲಕ್ಷ್ಮಿ ನಡುವೆ ತೀವ್ರ ವಾಗ್ವಾದ ನಡೆದಿದೆ.

ಜಗಳ ತಾರಕಕ್ಕೇರಿದ ವೇಳೆ ಕುಶಾಲ್ ಕೂಡ ತಾಯಿಯ ಬೆಂಬಲಕ್ಕೆ ನಿಂತಿದ್ದಾನೆ. ಈ ವೇಳೆ ಮನೆಯಲ್ಲಿದ್ದ ಮುದ್ದೆ ಮಾಡುವ ಕೋಲಿನಿಂದ ಜಯಮ್ಮ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಜಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ತಾಯಿ-ಮಗ ಇಬ್ಬರೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ, ಕೆಲವೇ ಹೊತ್ತಿನಲ್ಲಿ ಕುಶಾಲ್ ತನ್ನ ಸ್ನೇಹಿತನಿಗೆ ಕರೆ ಮಾಡಿ, “ಅಜ್ಜಿ ಸತ್ತಿದ್ದಾರೆ, ಬಾ ಕುಡಿಯೋಣ” ಎಂದು ಕರೆದಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಸ್ನೇಹಿತ ಮನೆಗೆ ಬಂದಾಗ, ಜಯಮ್ಮ ಅವರ ಮೃತದೇಹದ ಪಕ್ಕದಲ್ಲೇ ಕುಶಾಲ್ ಮದ್ಯಪಾನ ಮಾಡುತ್ತಿದ್ದುದನ್ನು ನೋಡಿ ಬೆಚ್ಚಿಬಿದ್ದಿದ್ದಾನೆ. ಮೃತದೇಹದ ಮೇಲಿದ್ದ ಗಾಯಗಳನ್ನು ಗಮನಿಸಿದ ಆತ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮಾಹಿತಿ ಪಡೆದ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದಾಗ ಕೊಲೆ ನಡೆದಿರುವುದು ದೃಢಪಟ್ಟಿದೆ. ತಕ್ಷಣವೇ ಭಾಗ್ಯಲಕ್ಷ್ಮಿ ಮತ್ತು ಕುಶಾಲ್ ಅವರನ್ನು ಬಂಧಿಸಿ ವಿಚಾರಣೆ ಆರಂಭಿಸಲಾಗಿದೆ.

ಒಂದು ಕಾಲದಲ್ಲಿ ಸುಸ್ಥಿತಿಯಲ್ಲಿದ್ದ ಕುಟುಂಬ, ಮದ್ಯಪಾನದ ದುಷ್ಚಟದಿಂದ ಹೇಗೆ ದುರಂತದ ದಾರಿಗೆ ತಲುಪಿತು ಎಂಬುದಕ್ಕೆ ಈ ಘಟನೆ ಮತ್ತೊಂದು ಕಹಿ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

10 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago