ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಗೊಲ್ಲಪ್ರೋಲು ಪ್ರದೇಶದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದಿದ್ದ ಯುವತಿಯೊಬ್ಬಳು, ತಾನು ಪ್ರೀತಿಸಿದ್ದ ಯುವಕನಿಗೆ ವೀಡಿಯೊ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
27 ವರ್ಷದ ತಂಡಿ ಫಿಸ್ಕಿಲ್ಲಾ ಕಾಕಿನಾಡದ ಎಸ್‌ಆರ್‌ಎಂಟಿ ಮಾಲ್‌ನಲ್ಲಿರುವ ರಿಲಯನ್ಸ್ ಡಿಜಿಟಲ್ ಶೋರೂಮ್‌ನಲ್ಲಿ ಬಜಾಜ್ ಫೈನಾನ್ಸ್ ಸೇಲ್ಸ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ವೇಳೆ ಅವರ ತಂದೆ-ತಾಯಿ ಒಡಿಶಾಕ್ಕೆ ಕಾರ್ಯಕ್ರಮ ನಿಮಿತ್ತ ತೆರಳಿದ್ದರಿಂದ ಫಿಸ್ಕಿಲ್ಲಾ ಮನೆಯಲ್ಲಿ ಒಬ್ಬರೇ ಇದ್ದರು. ಈ ಸಂದರ್ಭದಲ್ಲೇ ಮಂಗಳವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೂ ಮುನ್ನ ಫಿಸ್ಕಿಲ್ಲಾ ತಮ್ಮ ಸಹೋದ್ಯೋಗಿ ನರೇಂದ್ರ ಕುಮಾರ್ ಅವರಿಗೆ ಕರೆ ಮಾಡಿ, ತಾನು ಆತ್ಮಹತ್ಯೆ ಮಾಡಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ನರೇಂದ್ರ ತಕ್ಷಣವೇ ಮತ್ತೊಬ್ಬ ಸ್ನೇಹಿತ ಚಿನಬಾಬು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಕೂಡಲೇ ಫಿಸ್ಕಿಲ್ಲಾ ನಿವಾಸಕ್ಕೆ ಧಾವಿಸಿದಾಗ ಮನೆಯ ಬಾಗಿಲು ತೆರೆದಿದ್ದು, ಫಿಸ್ಕಿಲ್ಲಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಫಿಸ್ಕಿಲ್ಲಾ ಕಳೆದ ಎರಡು ವರ್ಷಗಳಿಂದ ತಮ್ಮ ಸಹೋದ್ಯೋಗಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಆ ಯುವಕ ಬೇರೆಡೆಗೆ ವರ್ಗಾವಣೆಯಾಗಿದ್ದು, ಆತನಿಗೆ ಬೇರೆ ಕುಟುಂಬದಲ್ಲಿ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಇದೇ ಮನಸ್ತಾಪದಿಂದ ಫಿಸ್ಕಿಲ್ಲಾ ಆ ಯುವಕನಿಗೆ ವೀಡಿಯೊ ಕಾಲ್ ಮಾಡಿ ದುರಂತ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರೇಮಿಯ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಎಸ್‌ಐ ಎನ್. ರಾಮಕೃಷ್ಣ ತಿಳಿಸಿದ್ದಾರೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…