Categories: CrimeLatest

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ ಕುಟುಂಬ ಸಮೇತ ಹೊರಟಿದ್ದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮನಕಲುಕುವಂತಿದೆ.

ತರಕಾರಿ ವ್ಯಾಪಾರ ಮಾಡಿಕೊಂಡು ಬೆಂಗಳೂರಿನಲ್ಲಿ ನೆಲೆಸಿದ್ದ ರವಿ ಕುಟುಂಬ, ಬಾಡಿಗೆ ಕಾರಿನಲ್ಲಿ ದೇವರ ದರ್ಶನಕ್ಕೆ ತೆರಳಿತ್ತು. ಮೊದಲು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿದ ಕುಟುಂಬ, ಬಳಿಕ ಸಂಜೆ ವೇಳೆಗೆ ಮುತ್ತತ್ತಿಗೆ ಆಗಮಿಸಿತು. ಸಂಜೆ ಸುಮಾರು 4:45ರ ವೇಳೆಗೆ ಮುತ್ತತ್ತಿಯ ಆಂಜನೇಯಸ್ವಾಮಿ ದೇವರ ದರ್ಶನ ಮುಗಿಸಿ, ಕಾವೇರಿ ನದಿಯ ತೀರಕ್ಕೆ ತೆರಳಿದ್ದರು.

ಅಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಸಿಬ್ಬಂದಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ, ನೀರಿನ ಪ್ರಮಾಣ ಕಡಿಮೆ ಇದೆ ಎಂದು ಭಾವಿಸಿ ಫೋಟೋ ತೆಗೆಯಲು ಕುಟುಂಬದವರು ನದಿಗೆ ಇಳಿದಿದ್ದಾರೆ. ಇದೇ ವೇಳೆ ವಿಜಯಮ್ಮ ಅವರು ನೀರಿನಲ್ಲಿ ಜಾರಿ ಮುಳುಗಲಾರಂಭಿಸಿದರು. ಅವರನ್ನು ರಕ್ಷಿಸಲು ಹೋಗಿದ್ದ ಮತ್ತಿತರರು ಕೂಡ ನೀರಿನ ಹೊಳೆಯ ಸೆಳೆತಕ್ಕೆ ಸಿಲುಕಿ ಒಬ್ಬರ ಹಿಂದೆ ಒಬ್ಬರು ಮುಳುಗಿದ್ದಾರೆ.

ಘಟನೆಯಲ್ಲಿ 50 ವರ್ಷದ ವಿಜಯಮ್ಮ, 28 ವರ್ಷದ ಶ್ವೇತಾ, 20 ವರ್ಷದ ಚೈತ್ರ, 28 ವರ್ಷದ ಪ್ರಿಯಾಂಕಾ ಹಾಗೂ ಕಾರು ಚಾಲಕ ಮಹೇಶ್ ಮೃತಪಟ್ಟಿದ್ದಾರೆ. ಸ್ಥಳೀಯರು ರವಿ ಮತ್ತು ನಾಲ್ಕು ವರ್ಷದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಕುಟುಂಬದ ಸಂತಸದ ಪ್ರವಾಸ ಕ್ಷಣಾರ್ಧದಲ್ಲಿ ಶೋಕ ಸಾಗರವಾಗಿದ್ದು, ಈ ದುರಂತ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

13 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

17 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago