ಬೆಂಗಳೂರು: ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ಒಟ್ಟು 18 ತಹಶೀಲ್ದಾರ್‌ಗಳನ್ನು ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ.
ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರು ವರ್ಗಾವಣೆ ಮತ್ತು ಸ್ಥಳನಿಯುಕ್ತಿಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಕೆಲವು ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಲಾಗಿದ್ದು, ವಿವಿಧ ತಾಲೂಕುಗಳು, ಜಿಲ್ಲಾಧಿಕಾರಿ ಕಚೇರಿಗಳು ಹಾಗೂ ಸರ್ಕಾರಿ ನಿಗಮ-ಮಂಡಳಿಗಳಲ್ಲಿನ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ.
ಪ್ರಮುಖ ವರ್ಗಾವಣೆಗಳು ಹೀಗಿವೆ:
ಗ್ರೇಡ್-2 ತಹಶೀಲ್ದಾರ್ ಸಂಗಮೇಶ ಜಿಡಗ ಅವರನ್ನು ಬಳ್ಳಾರಿ ನಗರಾಭಿವೃದ್ಧಿ ಕೋಶದಿಂದ ಯಾದಗಿರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಪುರಸಭಾ ತಹಶೀಲ್ದಾರ್ ಹುದ್ದೆಗೆ ವರ್ಗಾಯಿಸಲಾಗಿದೆ.
ಎಂ.ಆರ್. ಷಣ್ಮುಖ ಅವರನ್ನು ಕಾರಟಗಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಗ್ರೇಡ್-2 ಅಧಿಕಾರಿ ಶಾರದಾ ಬಿರಾದಾರ ಅವರನ್ನು ಕಲಬುರಗಿಯ ಕೆಕೆಆರ್‌ಡಿಬಿ (KKRDB) ಸಂಸ್ಥೆಯ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಗ್ರೇಡ್-2 ಅಧಿಕಾರಿ ಹೆಚ್.ಸಿ. ಸುಜಾತ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ಗ್ರೇಡ್-1 ಅಧಿಕಾರಿ ರುಕಿಯಾ ಬೇಗಂ ಅವರ ಹಿಂದಿನ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿದ್ದು, ಅವರು ಸಾಲಿಗ್ರಾಮದಲ್ಲೇ ಮುಂದುವರಿಯಲಿದ್ದಾರೆ.
ರೂಪ. ಡಿ ಅವರನ್ನು ಕರ್ನಾಟಕ ರಾಜ್ಯ ಹಣಕಾಸು ನಿಗಮದ (KSFC) ವಿಶೇಷ ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ. ಅದೇ ರೀತಿ ನೀಲಬಾಯಿ ಲಮಾಣಿ ಅವರನ್ನು ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಸ್ಥಳನಿಯುಕ್ತಿಗೊಳಿಸಲಾಗಿದೆ.
ಗ್ರೇಡ್-2 ಅಧಿಕಾರಿ ಎಸ್.ಬಿ. ಕಾಯಲಿ ಅವರನ್ನು ಬೀಳಗಿಯಿಂದ ಜಮಖಂಡಿ ತಾಲೂಕು ತಹಶೀಲ್ದಾರ್ ಹುದ್ದೆಗೆ ವರ್ಗಾಯಿಸಲಾಗಿದೆ.
ಎಂ.ವಿ. ಬಿರಾದರ ಪಾಟೀಲ ಅವರನ್ನು ರಾಮದುರ್ಗದಿಂದ ಅಥಣಿ ತಾಲೂಕಿಗೆ ವರ್ಗಾಯಿಸಲಾಗಿದ್ದು, ಆರ್.ಎಸ್. ವಳಸಂಗ ಅವರನ್ನು ಅಥಣಿಯಿಂದ ರಾಮದುರ್ಗ ತಾಲೂಕಿಗೆ ವರ್ಗಾಯಿಸುವ ಮೂಲಕ ಅಧಿಕಾರಿಗಳ ಪರಸ್ಪರ ಅದಲು-ಬದಲು ಮಾಡಲಾಗಿದೆ.
ಗ್ರೇಡ್-1 ಅಧಿಕಾರಿ ಜಯಲಕ್ಷ್ಮಿ ವಸ್ತ್ರದ ಅವರನ್ನು ಗದಗ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ ನಿಯುಕ್ತಿಗೊಳಿಸಲಾಗಿದೆ.
ಗ್ರೇಡ್-2 ಅಧಿಕಾರಿ ಜಿ.ಕೆ. ಮಂಜುನಾಂದ ಅವರನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ವಿ.ಎಸ್. ರವೀಂದ್ರ ಅವರನ್ನು ಬೆಂಗಳೂರು ಮಹಾನಗರ ಕಾರ್ಯಪಡೆ (BMTF) ತಹಶೀಲ್ದಾರ್ ಹುದ್ದೆಗೆ ವರ್ಗಾಯಿಸಲಾಗಿದೆ.
ಗ್ರೇಡ್-1 ಅಧಿಕಾರಿ ಟಿ. ವಿನೋದ ಅವರನ್ನು ಮೈಸೂರಿನ ಯು.ಪಿ.ಓ.ಆರ್. (UPOR) ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.
ನರಸಿಂಹಮೂರ್ತಿ ಟಿ.ಎನ್. ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಹುದ್ದೆಗೆ ವರ್ಗಾಯಿಸಲಾಗಿದೆ.
ಗ್ರೇಡ್-2 ಅಧಿಕಾರಿ ಡಿ.ಜೆ. ಕೋರಿ ಅವರನ್ನು ಬೆಳಗಾವಿಯ ವಿಶೇಷ ಜಿಲ್ಲಾಧಿಕಾರಿಗಳ ಕಚೇರಿಯ ವಿಶೇಷ ತಹಶೀಲ್ದಾರ್ ಆಗಿ ನಿಯುಕ್ತಿಗೊಳಿಸಲಾಗಿದೆ.
ಜೆ.ವಿ. ತುಳಸಿ ಅವರನ್ನು ಗುಡಿಬಂಡೆಯಿಂದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ (KRDCL) ವರ್ಗಾಯಿಸಲಾಗಿದೆ.
ಇನ್ನು ಗ್ರೇಡ್-1 ಅಧಿಕಾರಿ ಕಾವ್ಯಶ್ರೀ ಹೆಚ್. ಅವರನ್ನು ಬೆಂಗಳೂರಿನ ಐ.ಎಂ.ಎ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರ ಕಚೇರಿಯ ತಹಶೀಲ್ದಾರ್ ಆಗಿ ಸ್ಥಳನಿಯುಕ್ತಿಗೊಳಿಸಲಾಗಿದೆ.
ತಕ್ಷಣ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ವರ್ಗಾವಣೆ ಮತ್ತು ಸ್ಥಳನಿಯುಕ್ತಿಗೊಂಡಿರುವ ಎಲ್ಲ ಅಧಿಕಾರಿಗಳು ತಮ್ಮ ಹೊಸ ನಿಯೋಜಿತ ಸ್ಥಳಗಳಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಸಂಬಂಧಿಸಿದ ಚಾರ್ಜ್ ರಿಪೋರ್ಟ್ (CTC) ಅನ್ನು ಸರ್ಕಾರಕ್ಕೆ ಸಲ್ಲಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದ ಈ ವರ್ಗಾವಣೆ ಆದೇಶದಿಂದ ಕಂದಾಯ ಇಲಾಖೆಯ ವಿವಿಧ ತಾಲೂಕುಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಬದಲಾವಣೆಗಳು ನಡೆಯಲಿದ್ದು, ಸಾರ್ವಜನಿಕ ಸೇವೆಗಳ ಕಾರ್ಯನಿರ್ವಹಣೆಯಲ್ಲಿ ಮತ್ತಷ್ಟು ಪರಿಣಾಮಕಾರಿತ್ವ ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…