ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬಂಧಿಸಿ, 7 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬೆಂಗಳೂರು ರಾಮಮೂರ್ತಿ ನಗರದ ಹನಿಯಪ್ಪನ್ (60) ಎಂದು ಗುರುತಿಸಲಾಗಿದ್ದು, ಅವರು ರೈಲಿನ ಮೂಲಕ ಗಾಂಜಾ ಸಾಗಿಸುತ್ತಿದ್ದ ವೇಳೆ ಹಿಡಿಯಲಾಗಿದೆ. ಚಿಕ್ಕಬಳ್ಳಾಪುರ ಉಪವಿಭಾಗದ ಅಬಕಾರಿ ಅಧೀಕ್ಷಕ ಅರುಣ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಕಾರ್ಯಾಚರಣೆಯು ಯಶಸ್ವಿಯಾಗಿದೆ.
ಆರೋಪಿಯ ಒಪ್ಪಿಗೆ ಹೇಳಿಕೆ
ಪ್ರಾಥಮಿಕ ವಿಚಾರಣೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬರು 500 ರೂ. ಪಾವತಿಸುವುದಾಗಿ ಹೇಳಿದ್ದು, ಅದರಂತೆ ಗಾಂಜಾ ಸಾಗಿಸುತ್ತಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.
ದಾಳಿಯಲ್ಲಿ ಪಾಲ್ಗೊಂಡ ಅಧಿಕಾರಿಗಳು
ಈ ಕಾರ್ಯಾಚರಣೆಯಲ್ಲಿ ಗೌರಿಬಿದನೂರು ಅಬಕಾರಿ ನಿರೀಕ್ಷಕರಾದ ಮಂಜುನಾಥ್, ಅಶ್ವಿನಿ ಬೆಳ್ಳೂರ್, ಉಪವಿಭಾಗದ ವಿನೋದ್ ಡಿಎಲ್, ಹಿಂದೂಪುರ ಆರ್‌ಪಿಎಫ್ ಅಧಿಕಾರಿ ಸಾಯಿನಾಥ್ ರೆಡ್ಡಿ ಮತ್ತು ಸಿಬ್ಬಂದಿಗಳಾದ ರವಿ ಪ್ರಸಾದ್, ಹರೀಶ್, ರಾಜಣ್ಣ, ಕಾಂತರಾಜ್ ಭಾಗವಹಿಸಿದ್ದರು.
ಈ ಸಂಬಂಧ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಮುಂದಿನ ವಿಚಾರಣೆ ನಡೆಯುತ್ತಿದೆ. ವರದಿ: ಅವಿನಾಶ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…