ಹುಣಸೂರು: ಪ್ಯಾಸೆಂಜರ್ ಆಟೋ ಬಳಸಿಕೊಂಡು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಯುವಕನನ್ನು ಹುಣಸೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಗಾಂಜಾ ಹಾಗೂ ಆಟೋ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ವ್ಯಕ್ತಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಸಯ್ಯದ್ ಯೂನಸ್. ಈತನಿಂದ ಸುಮಾರು 926 ಗ್ರಾಂ ಒಣ ಗಾಂಜಾ ಹಾಗೂ ಪ್ಯಾಸೆಂಜರ್ ಆಟೋ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು ₹50,000 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನಿಂದ ಪಂಚವಳ್ಳಿ ಕಡೆಗೆ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಹುಣಸೂರು ನಗರ ಠಾಣೆ ಪೊಲೀಸರು ಹಾಳಗೆರೆ ಜಂಕ್ಷನ್ ಬಳಿ ತಪಾಸಣೆ ನಡೆಸಿದ್ದು, ಈ ವೇಳೆ ಆಟೋದಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾ ಪತ್ತೆಯಾಗಿದೆ. ವಿಚಾರಣೆ ವೇಳೆ ಆರೋಪಿ ಹಣ ಗಳಿಕೆಯ ಹಿನ್ನಲೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದಾಗಿ ಒಪ್ಪಿಗೆ ನೀಡಿದ್ದಾನೆ.
ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್, ಎಸ್‌ಐಗಳು ಜಮೀರ್ ಅಹಮದ್, ಮಹಾಲಿಂಗಯ್ಯ ಮತ್ತು ಸಿಬ್ಬಂದಿ ಅರುಣ್, ಶ್ರೀರಾಜರತ್ನಂ, ಮಂಜುನಾಥ್, ಇರ್ಫಾನ್, ಮಹೇಂದ್ರ, ರವಿಕುಮಾರ್ ಭಾಗವಹಿಸಿದ್ದರು. ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವ ನೀಡಿದ್ದು, ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್ ತಂಡದ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…