Categories: CrimeLatest

ಲೊಕ್ಯಾಂಟೋದಲ್ಲಿ ಯುವತಿಯರ ಹೆಸರಿನಲ್ಲಿ ಬಲೆ: ಭೇಟಿಗೆ ಬಂದವರ ಅಪಹರಣ, ಸುಲಿಗೆ; 11 ಮಂದಿ ಬಂಧನ

ಬೆಂಗಳೂರು: ಆನ್‌ಲೈನ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಜಾಹೀರಾತುಗಳನ್ನು ಪ್ರಕಟಿಸಿ, ಭೇಟಿಗೆ ಬರುವ ವ್ಯಕ್ತಿಗಳನ್ನು ಅಪಹರಿಸಿ ಹಣ, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಸಿಸಿಬಿ ಮಹಿಳಾ ಘಟಕದ ಪೊಲೀಸರು ಭೇದಿಸಿದ್ದು, 11 ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಗಳು ಲೊಕ್ಯಾಂಟೋ ವೆಬ್‌ಸೈಟ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದರು. ಆ ಜಾಹೀರಾತುಗಳನ್ನು ನಂಬಿ ಯುವತಿಯನ್ನು ಭೇಟಿ ಮಾಡಲು ಬಂದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಈ ಗ್ಯಾಂಗ್ ಅಪರಾಧ ಎಸಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದಲ್ಲಿ ಜೀಬಾ ಖಾನ್ ಹಾಗೂ ದೀಪಾ ಎಂಬ ಇಬ್ಬರು ಮಹಿಳೆಯರು ಸಂತ್ರಸ್ತರನ್ನು ಸಂಪರ್ಕಿಸಿ ಭೇಟಿಗೆ ಆಹ್ವಾನಿಸುತ್ತಿದ್ದರು. ಸ್ಥಳಕ್ಕೆ ಬಂದ ಬಳಿಕ ಚೇತನ್, ಮನು, ಶಾಬು, ಮಂಜುನಾಥ್, ಜಯಕುಮಾರ್, ಅರುಣ್ ಕೀರ್ತಿ, ಕಾಂತರಾಜು, ಸಂದೀಪ್ ಸೇರಿದಂತೆ ಇತರ ಆರೋಪಿಗಳು ಏಕಾಏಕಿ ದಾಳಿ ನಡೆಸಿ ಅಪಹರಿಸುತ್ತಿದ್ದರು.

ಬಳಿಕ ಸಂತ್ರಸ್ತರನ್ನು ಆಟೋ ಹಾಗೂ ಬೈಕ್‌ಗಳಲ್ಲಿ ನಗರದ ವಿವಿಧ ಭಾಗಗಳಿಗೆ ಕರೆದೊಯ್ದು ಬೆದರಿಕೆ ಹಾಕಿ, ಅವರ ಬಳಿಯಿದ್ದ ನಗದು, ಮೊಬೈಲ್ ಫೋನ್ ಮತ್ತು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಕುರಿತು ಮಾಹಿತಿ ಪಡೆದ ಸಿಸಿಬಿ ಮಹಿಳಾ ಘಟಕದ ಅಧಿಕಾರಿಗಳು ತನಿಖೆ ನಡೆಸಿ, ಒಟ್ಟು 11 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಆಟೋಗಳು, ನಾಲ್ಕು ಬೈಕ್‌ಗಳು, 13 ಮೊಬೈಲ್ ಫೋನ್‌ಗಳು ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಶೋಧ ಮುಂದುವರಿದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಸಿಸಿಬಿ ಪೊಲೀಸರು ಕೈಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಪ್ರಕಟವಾಗುವ ಅಪರಿಚಿತ ಹಾಗೂ ಅನುಮಾನಾಸ್ಪದ ಜಾಹೀರಾತುಗಳನ್ನು ನಂಬಿ ಭೇಟಿಗೆ ತೆರಳಬಾರದು ಎಂದು ಸಾರ್ವಜನಿಕರಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

23 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

24 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

24 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago