ಹಾವೇರಿ, ಆ.12 : ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರ್ವಜನಿಕ ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸ್‌ಗಳಲ್ಲಿ ಬ್ರೇಕ್ ಫೇಲ್, ಚಕ್ರ ಕಳಚಿ ಬೀಳುವುದು, ಯಾಂತ್ರಿಕ ದೋಷಗಳು ಸೇರಿದಂತೆ ನಾನಾ ಸಮಸ್ಯೆಗಳು ವರದಿಯಾಗುತ್ತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಇತ್ತೀಚಿನ ಘಟನೆಯಲ್ಲಿ, ಹಾವೇರಿ–ಮೇಲ್ಮರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎ 25 ಎಫ್ 2909 ಸಂಖ್ಯೆಯ ಸರ್ಕಾರಿ ಬಸ್‌ನ ಮೇಲ್ಛಾವಣಿಯೇ ಮಳೆಯ ನೀರು ಸೋರಿಕೆಯಾಗಿದೆ. ಪರಿಣಾಮವಾಗಿ, ಮಳೆ ನೀರು ಒಳಗೆ ಸುರಿದಿದ್ದು, ಪ್ರಯಾಣಿಕರು ಬಸ್ ಒಳಗೇ ಛತ್ರಿ ಹಿಡಿದು ಕುಳಿತುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಯಿತು. ಛತ್ರಿ ಇಲ್ಲದವರು ನೇರವಾಗಿ ಮಳೆ ನೀರಿನಲ್ಲೇ ತೇವಗೊಂಡು ಪ್ರಯಾಣ ಮಾಡಬೇಕಾಯಿತು.
ಬಸ್‌ಗಳ ದುಸ್ಥಿತಿಯನ್ನು ತೋರಿಸುವುದರ ಜೊತೆಗೆ ಸಾರಿಗೆ ಇಲಾಖೆಯ ನಿರ್ವಹಣಾ ವ್ಯವಸ್ಥೆಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸಿದೆ. ಸ್ಥಳೀಯರು, ಶಕ್ತಿ ಯೋಜನೆಯ ಪ್ರಯೋಜನದ ಜೊತೆಗೆ, ಬಸ್‌ಗಳ ತಾಂತ್ರಿಕ ಸ್ಥಿತಿಗತಿಗಳ ಮೇಲೂ ಸಮಾನ ಗಮನ ಹರಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…