ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.
ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಮರದ ಭಾರಕ್ಕೆ ಆರ್‌ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…